ದೇಶ

ದುರ್ಗಾ ಪೂಜೆ ವೇಳೆ ಶಾಂತಿ ಕದಡದಂತೆ ಆರ್ ಎಸ್ಎಸ್, ವಿಎಚ್ ಪಿಗೆ ಮಮತಾ ಎಚ್ಚರಿಕೆ

ದುರ್ಗಾ ಪೂಜೆ ವೇಳೆ ಶಾಂತಿ ಕದಡುವ ಕೆಲಸ ಮಾಡಬೇಡಿ. ಬೆಂಕಿಯೊಂದಿಗೆ ಆಟವಾಡುವ ಪ್ರಯತ್ನ ಬೇಡ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ದುರ್ಗಾ ಪೂಜೆ ವೇಳೆ ಶಾಂತಿ ಕದಡದಂತೆ ಆರ್ ಎಸ್ಎಸ್, ವಿಎಚ್ ಪಿಗೆ ಮಮತಾ ಎಚ್ಚರಿಕೆ
ಮಮತಾ ಬ್ಯಾನರ್ಜಿ
Published On :
ಕೋಲ್ಕತಾ: ದುರ್ಗಾ ಪೂಜೆ ವೇಳೆ ಶಾಂತಿ ಕದಡುವ ಕೆಲಸ ಮಾಡಬೇಡಿ. ಬೆಂಕಿಯೊಂದಿಗೆ ಆಟವಾಡುವ ಪ್ರಯತ್ನ ಬೇಡ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಆರ್ಎಸ್ಎಸ್ ಹಾಗೂ ಇತರೆ ಹಿಂದೂಪರ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬಿಜೊಯ ದಶಮಿ ವೇಳೆ ರಾಜ್ಯಾದ್ಯಂತ ಎಲ್ಲಾ ಧಾರ್ಮಿಕ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಶಸ್ತ್ರ ಪೂಜೆ ಮಾಡಲು ನಿರ್ಧರಿಸಿರುವುದಾಗಿ ವಿಎಚ್ ಪಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಈ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಅಂತಹ ಯಾವುಗೇ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ.
ಇದೇ ವೇಳೆ ವಿಜಯ ದಶಮಿ ದಿನ ದುರ್ಗಾ ಮೂರ್ತಿ ವಿಸರ್ಜಿಸುವುದರ ಮೇಲೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಸ್ಪಷ್ಟಪಡಿಸಿರುವ ಮಮತಾ ಬ್ಯಾನರ್ಜಿ, ಮುಹರಂ ಹಬ್ಬದ ಸಂದರ್ಭದಲ್ಲಿ, ಅಂದರೆ ವಿಜಯ ದಶಮಿಯ ಮರುದಿವಸ ದುರ್ಗಾ ಮೂರ್ತಿ ವಿಸರ್ಜನೆ ಬೇಡ ಎಂದು ಪೂಜೆಯ ಸಂಘಟಕರಲ್ಲಿ ಹೇಳಿದ್ದೇವೆ. ವಿಜಯ ದಶಮಿಯಂದು ಮೂರ್ತಿ ವಿಸರ್ಜನೆ ಮಾಡುವುದರ ಮೇಲೆ ನಿರ್ಬಂಧ ವಿಧಿಸಿಲ್ಲ. ಮತ್ತೊಂದು ಧರ್ಮದವರು ಪ್ರಾರ್ಥನೆಯಲ್ಲಿ ನಿರತರಾಗಿರುವ ಸಂದರ್ಭ ಕೇವಲ ನಾಲ್ಕು ಗಂಟೆ ಮಾತ್ರ ಮೂರ್ತಿ ವಿಸರ್ಜನೆ ಮಾಡಬಾರದು ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.