ಪ್ರಜಾಪ್ರಭುತ್ವದಲ್ಲಿ 'ವಂಶಪಾರಂಪರ್ಯ' ಅಸಹ್ಯ ಹುಟ್ಟಿಸುತ್ತದೆ: ವೆಂಕಯ್ಯ ನಾಯ್ಡು
ವಂಶಪಾರಂಪರ್ಯ ರಾಜಕೀಯ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪ್ರಜಾಪ್ರಭುತ್ವದಲ್ಲಿ ವಂಶಪಾರಂಪರ್ಯ ಪಾಲನೆ ಅಸಹ್ಯ ಹುಟ್ಟಿಸುತ್ತದೆ...

Published On :
ನವದೆಹಲಿ: ವಂಶಪಾರಂಪರ್ಯ ರಾಜಕೀಯ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು, ಪ್ರಜಾಪ್ರಭುತ್ವದಲ್ಲಿ ವಂಶಪಾರಂಪರ್ಯ ಪಾಲನೆ ಅಸಹ್ಯ ಹುಟ್ಟಿಸುತ್ತದೆ ಎಂದು ಶುಕ್ರವಾರ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ವಂಶಪಾರಂಪರ್ಯ ಕುರಿತಂತೆ ಚರ್ಚೆಗಳು ನಡೆಯುತ್ತಿವೆ. ವಂಶಪಾರಂಪರ್ಯ ಹಾಗೂ ಪ್ರಜಾಪ್ರಭುತ್ವ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ವಂಶಪಾರಂಪರ್ಯ ದೇಶದ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.
ನಾನು ಯಾವುದೇ ರಾಜಕೀಯ ಪಕ್ಷವನ್ನು ಉದ್ದೇಶಿಸಿ ಹೇಳಿಕೆಯನ್ನು ನೀಡುತ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ನಾನು ಈ ಹಿಂದೆಯೂ ದನಿಯನ್ನು ಎತ್ತುತ್ತಿದ್ದೆ. ಇದೀಗ ನಾನು ರಾಜಕೀಯದಿಂದ ಹೊರಗುಳಿದಿದ್ದೇನೆಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕಾದ ಬರ್'ಕ್ಲೆಯಲ್ಲಿನ ಪ್ರತಿಷ್ಠಿತ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗೆ ನಡೆಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿಯವರು, ಹೆಚ್ಚಿನ ದೇಶಗಳಲ್ಲಿ ವಂಶಪಾರಂಪರ್ಯದ ಆಡಳಿತ ನಡೆಯುತ್ತಿರುವುದು ಸಾಮಾನ್ಯವಾಗಿದೆ. ಭಾರತದಲ್ಲಿ ಕೂಡ ಅದು ಅಷ್ಟೇ ಸಾಮಾನ್ಯವಾಗಿದೆ.
ಭಾರತದಲ್ಲಿನ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ವಂಶಪಾರಂಪರ್ಯ ನಡೆಯುತ್ತಿದೆ. ಅಖಿಲೇಶ್ ಯಾದವ್, ಸ್ಟಾಲಿನ್ ಮತ್ತು ನಟ ಅಭಿಷೇಕ್ ಬಚ್ಚನ್ ಕೂಡ ಸಿನಿಮಾ ರಂಗದಲ್ಲಿ ಇದಕ್ಕೆ ಉದಾಹರಣೆಯಾಗಿದ್ದಾರೆ. ಅದುದರಿಂದ ವಂಶಪಾರಂಪರ್ಯದ ಬಗ್ಗೆ ಮಾತಾಡುವಾಗ ಕೇವಲ ನನ್ನನ್ನು ಗುರಿ ಮಾಡಬೇಕೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Democracyಪ್ರಜಾಪ್ರಭುತ್ವRahul Gandhiರಾಹುಲ್ ಗಾಂಧಿವೆಂಕಯ್ಯ ನಾಯ್ಡುVenkaiah NaiduDynastic politicsವಂಶಪಾರಂಪರ್ಯ ರಾಜಕೀಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


