ದೇಶ

ಸೋನಿಯಾ, ರಾಹುಲ್ ನಿರ್ದೇಶನದ ಮೇರೆಗೆ ಮನೀಶ್ ಮೋದಿಯನ್ನು ನಿಂದಿಸಿ ಟ್ವೀಟ್ ಮಾಡಿದ್ದಾರೆ: ಬಿಜೆಪಿ

ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ನಿರ್ದೇಶನದ ಮೇರೆಗೆಯೇ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಿಂದಿಸಿ ಟ್ವೀಟ್ ಮಾಡಿದ್ದಾರೆಂದು...

ಸೋನಿಯಾ, ರಾಹುಲ್ ನಿರ್ದೇಶನದ ಮೇರೆಗೆ ಮನೀಶ್ ಮೋದಿಯನ್ನು ನಿಂದಿಸಿ ಟ್ವೀಟ್ ಮಾಡಿದ್ದಾರೆ: ಬಿಜೆಪಿ
ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ
Published On :
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ನಿರ್ದೇಶನದ ಮೇರೆಗೆಯೇ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ನಿಂದಿಸಿ ಟ್ವೀಟ್ ಮಾಡಿದ್ದಾರೆಂದು ಬಿಜೆಪಿ ಸೋಮವಾರ ಹೇಳಿದೆ. 
ಈ ಕುರಿತಂತೆ ಮಾಡನಾಡಿರುವ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು, ತಿವಾರಿ ಉತ್ತಮ ಹಾಗೂ ಸೂಕ್ಷ್ಮತೆಯುಳ್ಳ ವ್ಯಕ್ತಿಯಾಗಿದ್ದಾರೆ. ಆದರೆ, ಪ್ರಧಾನಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡುವ ಮೂಲಕ ತಮ್ಮ ವರ್ಚಸ್ಸನ್ನು ಹಾಳು ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ. 
ತಿವಾರಿ ಒಬ್ಬ ಉತ್ತಮ ವ್ಯಕ್ತಿ. ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರ ನಿರ್ದೇಶನದ ಮೇರೆಗೆಯೇ ಅವರು ಈ ರೀತಿಯಾಗಿ ಟ್ವೀಟ್ ಮಾಡಿದ್ದಾರೆಂದು ಸ್ವಾಮಿ ತಿಳಿಸಿದ್ದಾರೆ. 
ದೇಶದ ಪ್ರಧಾನಮಂತ್ರಿಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅಶ್ಲೀಲ ಪದಗಳನ್ನು ಬಳಕೆ ಮಾಡಿದ್ದಾರೆ. ಕೂಡಲೇ ಸೋನಿಯಾ ಗಾಂಧಿಯವರು ಕ್ಷಮೆಯಾಚಿಸಬೇಕು. ಇಲ್ಲದೇ ಹೋದರೆ, ಪಕ್ಷದ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ನಾಯಕ ನಳಿನ್ ಕೊಹ್ಲಿಯವರು ಆಗ್ರಹಿಸಿದ್ದಾರೆ. 
ನಿನ್ನೆಯಷ್ಟೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅಶ್ಲೀಲ ಪದಗಳಿಂದ ನಿಂದಿಸಿ ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿಯವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದರು. ಭಕ್ತರನ್ನು (ಅನುಯಾಯಿಗಳನ್ನು) ಚೂ...ಗಳನ್ನಾಗಿ (ಮೂರ್ಖರನ್ನಾಗಿ) ಮತ್ತು ಮೂರ್ಖರನ್ನು ಭಕ್ತರನ್ನಾಗಿ... ಮಾಡುವುದು ಎಂದರೆ ಇದೇ... ಮೋದಿಯವರ ಡಿಎನ್ಎಯಲ್ಲೇ ದೇಶಭಕ್ತಿ ತುಂಬಿದೆ. ಗಾಂಧೀಜಿಯವರೂ ಕೂಡ ಮೋದಿಯವರಿಗೆ ದೇಶಭಕ್ತಿಯನ್ನು ಬೋಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಇದೀಗ ಭಾರೀ ಖಂಡನೆಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.