ದೇಶ

ನರೋಡಾ ಹತ್ಯಾಕಾಂಡ: ಮಾಯಾ ಕೊಡ್ನಾನಿ ಪರ ಅಮಿತ್ ಶಾ ಸಾಕ್ಷ್ಯ

ತೀವ್ರ ಕುತೂಹಲ ಮೂಡಿಸಿರುವ 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆ ವೇಳೆ ಅಮಿತ್ ಶಾ...

ನರೋಡಾ ಹತ್ಯಾಕಾಂಡ: ಮಾಯಾ ಕೊಡ್ನಾನಿ ಪರ ಅಮಿತ್ ಶಾ ಸಾಕ್ಷ್ಯ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Published On :

ನವದೆಹಲಿ: ತೀವ್ರ ಕುತೂಹಲ ಮೂಡಿಸಿರುವ 2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದು, ವಿಚಾರಣೆ ವೇಳೆ ಅಮಿತ್ ಶಾ ಅವರು ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ್ದಾರೆಂದು ಸೋಮವಾರ ತಿಳಿದುಬಂದಿದೆ. 

ಗುಜರಾತ್ ರಾಜ್ಯದ ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ನುಡಿಯಲು ಇಂದು ನ್ಯಾಯಾಲಯಕ್ಕೆ ಹಾಜರಾಗಿರುವ ಅಮಿತ್ ಶಾ ಅವರು, ಹತ್ಯಾಕಾಂಡ ನಡೆದ ದಿನದಂದು ಸಾಕಷ್ಟು ಗದ್ದಲ ಹಾಗೂ ಗೊಂದಲಗಳು ಸೃಷ್ಟಿಯಾಗಿತ್ತು. ನಾನು ಬೆಳಿಗ್ಗೆ 9.30ಕ್ಕೆ ನಾಗರೀಕ ಆಸ್ಪತ್ರೆಗೆ ಭೇಟಿ ನೀಡಿದ್ದೆ. 9.45ರವರೆಗೂ ಆಸ್ಪತ್ರೆಯಲ್ಲಿಯೇ ಇದ್ದೆ, ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ ಜನರ ಸಂಬಂಧಿಸಿಕರು ಆಸ್ಪತ್ರೆಗೆ ಭೇಟಿ ನೀಡಿದ್ದರು, ಮರಣೋತ್ತರ ಪರೀಕ್ಷೆಗಳು ನಡೆಯುತ್ತಿದ್ದವು. ಈ ವೇಳೆ ಕೊಡ್ನಾನಿಯವರನ್ನು ಭೇಟಿ ಮಾಡಿದ್ದೆ ಎಂದು ಹೇಳಿದ್ದಾರೆ. 

ಬೆಳಿಗ್ಗೆ 11 - 11.15ರ ಸುಮಾರಿಗೆ ಆಸ್ಪತ್ರೆಯಿಂದ ಹೊರ ಹೊರಟಿದ್ದೆ. ಈ ವೇಳೆ ನನ್ನ ಸುತ್ತಲೂ ಸಾಕಷ್ಟು ಜನರಿದ್ದರು. ಮಾಯಾ ಕೊಡ್ನಾನಿ ಹಾಗೂ ನನ್ನನ್ನು ಪೊಲೀಸರು ತಮ್ಮ ಜೀಪ್ ಗಳಲ್ಲಿ ಕರೆದೊಯ್ದಿದ್ದರು ಎಂದು ತಿಳಿಸಿದ್ದಾರೆ. 

ನರೋಡಾ ಗಾಮ್ ಹತ್ಯಾಕಾಂಡದಲ್ಲಿ 97ಕ್ಕೂ ಹೆಚ್ಚು ಮುಸ್ಲಿಮರ ಹತ್ಯೆಯಾಗಿದ್ದು, ಹತ್ಯಾಕಾಂಡಕ್ಕೆ ಅಂದಿನ ಗುಜರಾತ್ ರಾಜ್ಯ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಇತರರ ಗುಂಪುಗಳೇ ಹೊಣೆಯೆಂದು ಆರೋಪಿಸಲಾಗಿತ್ತು. ಹಿಂಸಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಸಚಿವೆ ಮಾಯಾ ಕೊಡ್ನಾನಿಯವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿತ್ತು. 

ಗುಜರಾತ್ ರಾಜ್ಯದಲ್ಲಿ ನರೇಂದ್ರ ಮೋದಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮಾಯಾ ಕೊಡ್ನಾಯಿವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿದ್ದರು. ವೃತ್ತಿಯಲ್ಲಿ ಸ್ರೀರೋಗ ತಜ್ಞೆಯಾರಿರುವ ಮಾಯಾ ಅವರು ದುರ್ಘಟನೆ ನಡೆದ ದಿನದಂದು ಅಹ್ಮದಾಬಾದ್ ನಗರದ ಅಸ್ರವ ಪ್ರದೇಶದಲ್ಲಿನ ಆಸ್ಪತ್ರೆಯೊಂದರಲ್ಲಿ ಇದ್ದರು ಎಂದು ವಾದಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಇತರೆ 13 ಮಂದಿಗೆ ಸಮನ್ಸ್ ಜಾರಿ ಮಾಡುವಂತೆ ಮಾಯಾ ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದರು.

ಇದರಂತೆ 2002ರಲ್ಲಿ ನಡೆದ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣ ಸಂಬಂಧ ಸೆ.18 ರಂದು ವಿಚಾರಣೆ ನಡೆಯಲಿದ್ದು, ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ನ್ಯಾಯಾಲಯದ ಸಮನ್ಸ್ ಹಿನ್ನಲೆಯಲ್ಲಿ ಇಂದು ಅಮಿತ್ ಶಾ ಅವರು ವಿಚಾರಣೆಗೆ ಹಾಜರಾಗಿದ್ದು, ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಿದ್ದಾರೆ. 

ನರೋಡಾ ಹತ್ಯಾಕಾಂಡ ಪ್ರಕರಣ ಸಂಬಂಧ ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ. ಭಜರಂಗ ದಳದ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಕುಮಾರ್ ಸೇರಿದಂತೆ ಒಟ್ಟು 82 ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.