ದೇಶಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ಗೆ ಭಾವಪೂರ್ಣ ವಿದಾಯ!
ದೇಶದ ಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ವಿಧಿವಿಧಾನ ದೆಹಲಿಯಲ್ಲಿ ಸೋಮವಾರ ನಡೆಯುತ್ತಿದ್ದು, ಈಗಾಗಲೇ ದೆಹಲಿಯ ಪ್ರಮುಖ ಬೀದಿಗಳಲ್ಲಿ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಮೆರವಣಿಗೆ ಸಾಗಿದೆ.

Published On :
ನವದೆಹಲಿ: ದೇಶದ ಕಂಡ ಮಹಾನ್ ಯೋಧ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ವಿಧಿವಿಧಾನ ದೆಹಲಿಯಲ್ಲಿ ಸೋಮವಾರ ನಡೆಯುತ್ತಿದ್ದು, ಈಗಾಗಲೇ ದೆಹಲಿಯ ಪ್ರಮುಖ ಬೀದಿಗಳಲ್ಲಿ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಮೆರವಣಿಗೆ ಸಾಗಿದೆ.
ನಿನ್ನೆ ನಿಧನರಾಗಿದ್ದ 1965ರ ಇಂಡೋ-ಪಾಕ್ ಯುದ್ಧದ ಹೀರೋ ಭಾರತೀಯ ವಾಯು ಸೇನೆಯ ಮಾರ್ಷಲ್ ಅರ್ಜನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ದೆಹಲಿಯಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಹಾಗೂ ಸೇನಾ ಗೌರವಗಳೊಂದಿಗೆ ವಾಯುಸೇನಾ ಮಾರ್ಷಲ್ ಅರ್ಜನ್ ಸಿಂಗ್ ಅವರಿಗೆ ಭಾವಪೂರ್ಣ ವಿದಾಯ ನೀಡಲಾಯಿತು.
ದೆಹಲಿಯ ಬ್ರೇರ್ ಸ್ಕ್ರೇರ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು. ಇದಕ್ಕೂ ಮೊದಲು ದೆಹಲಿಯ ಪ್ರಮುಖ ಬೀದಿಗಳಲ್ಲಿ ಮಾರ್ಷಲ್ ಅರ್ಜನ್ ಸಿಂಗ್ ಅವರ ಪಾರ್ಥೀವ ಶರೀರದ ಮೆರವಣಿಗೆ ನಡೆಸಲಾಯಿತು. ವಾಯುಸೇನಾ ತುಕಡಿಗಳು ಸೇರಿದಂತೆ ಭಾರತೀಯ ಸೇನೆಯ ವಿವಿಧ ತುಕಡಿಗಳ ಸೈನಿಕರು ಪಾಲ್ಗೊಂಡಿದ್ದರು. ಅಂತ್ಯ ಸಂಸ್ಕಾರದ ವೇಳೆ 17 ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅರ್ಜನ್ ಸಿಂಗ್ ಅವರಿಗೆ ಗನ್ ಸೆಲ್ಯೂಟ್ ಗೌರವ ಸಲ್ಲಿಸಲಾಯಿತು.
ಇನ್ನು ಭಾರತ ಮಾತೆಯ ಅಗಲಿದ ಹೆಮ್ಮೆಯ ವೀರ ಪುತ್ರನ ಗೌರವಾರ್ಥವಾಗಿ ದೆಹಲಿಯಲ್ಲಿನ ಎಲ್ಲ ಸರ್ಕಾರಿ ಕಚೇರಿಗಳ ಕಟ್ಟಡಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತಿದೆ. ಅಲ್ಲದೆ ವಾಯುಪಡೆಯ 3 ಸುಖೋಯ್ ಯುದ್ಧ ವಿಮಾನಗಳು ಆಗಸದಲ್ಲಿ ವಾಯುಪಡೆಯ ಧ್ವಜ ಹಾರಾಟ ನಡೆಸುವ ಮೂಲಕ ಅಗಲಿದ ವೀರಯೋಧನಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿತು.
ಇನ್ನು ಅರ್ಜನ್ ಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಎಲ್ ಕೆ ಆಡ್ವಾಣಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ದೇಶದ ಭೂ, ವಾಯು ಮತ್ತು ನೌಕಾ ಪಡೆಯ ಎಲ್ಲ ಮೂರು ಮುಖ್ಯಸ್ಥರು ಭಾಗಿಯಾಗಿದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiIndian ArmyIndian Air Forceಅಂತ್ಯ ಸಂಸ್ಕಾರಭಾರತೀಯ ಸೇನೆfuneral ceremonyArjan Singhಅರ್ಜನ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?