ದೇಶ

ಗುರುಗ್ರಾಮ್ ವಿದ್ಯಾರ್ಥಿ ಕೊಲೆ ಪ್ರಕರಣ: ಬಸ್ ಕಂಡಕ್ಟರ್, ಶಾಲಾ ಸಿಬ್ಬಂದಿಗೆ ನ್ಯಾಯಾಂಗ ಬಂಧನ

ಗುರುಗ್ರಾಮದ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ ಪ್ರಧ್ಯುಮಾನ್ ಥಾಕೂರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ....

ಗುರುಗ್ರಾಮ್ ವಿದ್ಯಾರ್ಥಿ ಕೊಲೆ ಪ್ರಕರಣ: ಬಸ್ ಕಂಡಕ್ಟರ್, ಶಾಲಾ ಸಿಬ್ಬಂದಿಗೆ ನ್ಯಾಯಾಂಗ ಬಂಧನ
ಬಂಧಿತ ಆರೋಪಿಗಳು
Published On :
ಗುರುಗ್ರಾಮ್: ಗುರುಗ್ರಾಮದ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ ಪ್ರಧ್ಯುಮಾನ್ ಥಾಕೂರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಶಾಲಾ ಬಸ್ ಕಂಡಕ್ಟರ್ ಹಾಗೂ ಇಬ್ಬರು ಶಾಲಾ ಸಿಬ್ಬಂದಿಯನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. 
ತೀವ್ರ ವಿಚಾರಣೆಯ ಬಳಿಕ ಪೊಲೀಸರು ಬಂಧಿತ ಆರೋಪಿಗಳಾದ ಕಂಡಕ್ಟರ್ ಅಶೋಕ್ ಕುಮಾರ್, ರಯಾನ್ ಇಂಟರ್ ನ್ಯಾಷನಲ್ ಗ್ರೂಪ್ ನ ಉತ್ತರ ವಲಯ ಮುಖ್ಯಸ್ಥ ಮತ್ತು ಎಚ್ ಆರ್ ಮುಖ್ಯಸ್ಥರನ್ನು ಇಂದು ಕೋರ್ಟ್ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳನ್ನು ಸೆಪ್ಟೆಂಬರ್ 29ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
7 ವರ್ಷದ ವಿದ್ಯಾರ್ಥಿ ಕೊಲೆಯಾಗಿ 10 ದಿನಗಳ ನಂತರ ಇಂದು ರಯಾನ್ ಇಂಟರ್ ನ್ಯಾಷನಲ್ ಶಾಲೆ ಪುನಾರಂಭವಾಗಿದೆ. ಆದರೆ ಪೋಷಕರಿಗೆ ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ಇನ್ನೂ ಆತಂಕ ವ್ಯಕ್ತಪಡಿಸುತ್ತಿದ್ದಾರೆ.
ಸೆಪ್ಟೆಂಬರ್ 8ರಂದು ಪ್ರಧ್ಯುಮಾನ್ ಥಾಕೂರ್ ನನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು, ವಿದ್ಯಾರ್ಥಿಯ ಶವ ಶಾಲಾ ಶೌಚಾಲಯದಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.