ದೇಶ

ತೆಲಂಗಾಣ: ವಿಷ ಸೇವಿಸಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ

ಸಾಲಬಾಧೆಯಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಬಂದ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ....

ತೆಲಂಗಾಣ: ವಿಷ ಸೇವಿಸಿ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :
ಹೈದರಾಬಾದ್: ಸಾಲಬಾಧೆಯಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಬಂದ ಆರು ಮಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮಮಿಲ್ಲಗಡದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳನ್ನು ಕೆ ಜನಾರ್ದನ್(55), ಪತ್ನಿ ಚಂದ್ರಕಲಾ, ಅವರ ಪುತ್ರ ಅಶೋಕ್ ಹಾಗೂ ಮತ್ತೊಬ್ಬ ಪುತ್ರ ಸುರೇಶ್ ಪತ್ನಿ ಪ್ರಭಾತ ಮತ್ತು ಅವರ ಇಬ್ಬರು ಮಕ್ಕಳಾದ ಸಿರಿ ಹಾಗೂ ರಿತ್ವಿಕ್ ಎಂದು ಗುರುತಿಸಲಾಗಿದೆ.
ಜನಾರ್ದನ್ ಅವರು ಬಿಎಸ್ ಎನ್ ಉದ್ಯೋಗಿಯಾಗಿದ್ದು, ಅವರ ಒಬ್ಬ ಪುತ್ರ ಸುರೇಶ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೂಲಕ ಕೋಟ್ಯಾಂತರ ರುಪಾಯಿ ಕಳೆದುಕೊಂಡಿದ್ದರು. ಫೈನಾನ್ಸರ್ ಗಳಿಂದ ಕೋಟ್ಯಾಂತರ ರುಪಾಯಿ ಸಾಲ ಪಡೆದು ಅದನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ ಸುರೇಶ್, ಸಾಲ ಮರುಪಾವತಿಸಲು ಸಾಧ್ಯವಾಗದೆ ಸಾಲಗಾರರಿಂದ ತಪ್ಪಿಸಿಕೊಳ್ಳಲು ಕಳೆದ ಸೆಪ್ಟೆಂಬರ್ 11ರಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ಸಹ ನೀಡಿದೆ.
ಆ ಮಧ್ಯೆ ಫೈನಾನ್ಸರ್ ಗಳು ಮಗ ಪಡೆದ ಸಾಲ ಮರುಪಾವತಿಸುವಂತೆ ಜನಾರ್ದನ್ ಮೇಲೆ ಒತ್ತಡ ಹಾಕಿದ್ದರು. ಅಲ್ಲದೆ ಪದೇ ಪದೆ ಮನೆಗೆ ಭೇಟಿ ನೀಡಿ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತ ಜನಾರ್ದನ್ ಕುಟುಂಬ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ತೆಗೆದುಕೊಂಡಿದೆ.
ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಹಾಲು ವ್ಯಾಪಾರಿ ಬಾಗಿಲು ಬಾರಿಸಿದರು ಡೋರ್ ತೆಗೆಯದಿದ್ದಾಗ ಸ್ಥಳೀಯರ ಸಹಾಯದೊಂದಿಗೆ ಬಾಗಿಲು ಮುರಿದು ನೋಡಿದಾಗ ಆರು ಮಂದಿ ಮೃತಪಟ್ಟಿರುವುದು ತಿಳಿದು ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.