ಗೋವನ್ನು ಪೂಜಿಸುವವರು ಹಿಂಸಾಚಾರ ಮಾಡುವುದಿಲ್ಲ: ಮೋಹನ್ ಭಾಗ್ವತ್
ಗೋವನ್ನು ಪೂಜಿಸುವವರು ತಮ್ಮ ಭಾವನೆಗಳಿಗೆ ಧಕ್ಕೆ ಉಂಟಾದರೂ ಸಹ ಹಿಂಸಾಚಾರಕ್ಕೆ ಮುಂದಾಗುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.

Published On :
ಜೈಪುರ: ಗೋವನ್ನು ಪೂಜಿಸುವವರು ತಮ್ಮ ಭಾವನೆಗಳಿಗೆ ಧಕ್ಕೆ ಉಂಟಾದರೂ ಸಹ ಹಿಂಸಾಚಾರಕ್ಕೆ ಮುಂದಾಗುವುದಿಲ್ಲ ಎಂದು ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ.
ರಾಜಸ್ಥಾನಕ್ಕೆ ಭೇಟಿ ನೀಡಿರುವ ಮೋಹನ್ ಭಾಗ್ವತ್, ಕಾರ್ಯಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿದ್ದು, ಗೋವಿನ ಪೋಷಣೆ ನಮಗೆ ಆರ್ಥಿಕವಾಗಿಯೂ ಲಾಭದಾಯಕವಾಗಿದೆ ಎಂದಿದ್ದಾರೆ.
ಗೋವನ್ನು ಪೂಜಿಸುವವರು ಗೋವನ್ನು ಪೋಷಿಸುತ್ತಾರೆ, ಆದರೆ ತಮ್ಮ ಭಾವನೆಗಳಿಗೆ ಧಕ್ಕೆ ಉಂಟಾದರೂ ಸಹ ಹಿಂಸಾಚಾರಕ್ಕೆ ಮುಂದಾಗುವುದಿಲ್ಲ ಎಂದು ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೋಹನ್ ಭಾಗ್ವತ್ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಇದೇ ವೇಳೆ ಚೀನಾ ಸರಕುಗಳ ಬಗ್ಗೆಯೂ ಮಾತನಾಡಿರುವ ಮೋಹನ್ ಭಾಗ್ವತ್, ಸ್ವದೇಶಿ ಉತ್ಪನ್ನಗಳನ್ನು ಬಳಕೆ ಮಾಡುವುದು ಎಂದರೆ ಸಣ್ಣ ಮತ್ತು ಗೃಹ ಕೈಗಾರಿಕೆಗಳ ಉತ್ಪನ್ನಗಳನ್ನು ಬಳಕೆ ಮಾಡುವುದು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


