ದೇಶ

ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಮುಂದಾದ ಶಿವಸೇನೆ

ಮಹಾರಾಷ್ಟ್ರದಲ್ಲಿ ಸುಮಾರು ಮೂರು ವರ್ಷಗಳ ನಂತರ ಬಿಜೆಪಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮುನಿಸಿಕೊಂಡಿರುವ....

ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳಲು ಮುಂದಾದ ಶಿವಸೇನೆ
ಉದ್ಧವ್ ಠಾಕ್ರೆ- ದೇವೇಂದ್ರ ಫಡ್ನವಿಸ್
Published On :
ಮುಂಬೈ: ಮಹಾರಾಷ್ಟ್ರದಲ್ಲಿ ಸುಮಾರು ಮೂರು ವರ್ಷಗಳ ನಂತರ ಬಿಜೆಪಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮುನಿಸಿಕೊಂಡಿರುವ ಮಿತ್ರ ಪಕ್ಷ ಶಿವಸೇನೆ ಈಗ ಸರ್ಕಾರದಿಂದ ಹೊರ ಬರುವ ಚಿಂತನೆ ನಡೆಸಿದೆ.
ಇಂದು ನಡೆದ ಪಕ್ಷದ ಶಾಸಕರು, ಸಂಸದರು, ಹಾಗೂ ಸಚಿವರ ಸಭೆಯಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಫಡ್ನವಿಸ್ ನೇತೃತ್ವದ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಕಡತಗಳು ವಿಲೇವಾರಿಯಾಗದಿರುವ ಬಗ್ಗೆ ಮತ್ತು ನಿರ್ಣಯಗಳನ್ನು ಜಾರಿಗೆ ತರದಿರುವುದರ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಸಭೆಯ ನಂತರ ಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರೌತ್ ಹಾಗೂ ಪರಿಸರ ಸಚಿವ ರಾಮದಾಸ್ ಕದಂ ಅವರು ಮಾಧ್ಯಮಗಳಿಗೆ ಪ್ರತ್ಯೇಕವಾಗಿ ಮಾತನಾಡಿದ್ದು, ಇಬ್ಬರೂ ನಾಯಕರು ಪಕ್ಷದ ಆಂತರಿಕ ಬೆಳವಣಿಗೆಗಳನ್ನು ಖಚಿತಪಡಿಸಿದ್ದಾರೆ.
ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ಶಾಸಕರು ಪಕ್ಷದ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಪಕ್ಷ ಅವರನ್ನು ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದು ರೌತ್ ಹೇಳಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಮುಂದುವರೆಯಬೇಕೆ ಅಥವಾ ಬೇಡವೇ ಎಂಬುದರ ಕುರಿತು ಮಾತುಕತೆ ನಡೆಯುತ್ತಿದೆ. ಕಾದು ನೋಡಿ ಎಂದಿದ್ದಾರೆ.
ಪಿತೃ ಪಕ್ಷ ಮುಗಿದ ನಂತರ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಳ್ಳುವ ಕುರಿತು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.