ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಯೋಗಿ ಆದಿತ್ಯನಾಥ್
ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು....

Published On :
ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಉತ್ತರ ಪ್ರದೇಶ ವಿಧಾನ ಪರಿಷತ್ ಸದಸ್ಯರಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಯೋಗಿ ಆದಿತ್ಯನಾಥ್ ಜೊತೆಗೆ ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಕೂಡ ಪರಿಷತ್ ಸಭಾಪತಿ ರಮೇಶ್ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಲಕ್ನೋದಲ್ಲಿರುವ ಶಾಸನಸಭೆ ಕಟ್ಟಡದ ತಿಲಕ್ ಹಾಲ್ ನಲ್ಲಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವರುಗಳಾದ ಸ್ವತಂತ್ರ್ಯ ದೇವ್ ಸಿಂಗ್ ಮತ್ತು ಮೋಹ್ಸಿನ್ ರಾಜಾ ಅವರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು, ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಆರು ತಿಂಗಳ ಒಳಗಾಗಿ ವಿಧಾನ ಸಭೆ ಅಥವಾ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಜನಾದೇಶ ಪಡೆಯಬೇಕೆಂಬ ಕಾನೂನಿನ್ವಯ ಯೋಗಿ ಆದಿತ್ಯ ನಾಥ್ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
oathUttar pradeshಉತ್ತರ ಪ್ರದೇಶವಿಧಾನ ಪರಿಷತ್ಪ್ರಮಾಣ ವಚನlegislative councilYogi Adityanathಯೋಗಿ ಆದಿತ್ಯ ನಾಥ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


