ದೀಪಾವಳಿ ಹೊತ್ತಿಗೆ ಪೆಟ್ರೋಲ್ ಬೆಲೆ ಇಳಿಕೆ ಸಾಧ್ಯತೆ: ಧರ್ಮೇಂದ್ರ ಪ್ರಧಾನ್
ಮುಂಬರುವ ದೀಪಾವಳಿ ಹಬ್ಬದ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಇಂಧನ ದರಗಳು ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Published On :
ಅಮೃತಸರ: ಮುಂಬರುವ ದೀಪಾವಳಿ ಹಬ್ಬದ ಹೊತ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ ಸೇರಿದಂತೆ ಇಂಧನ ದರಗಳು ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮೃತಸರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್ ಅವರು, ''ಜಾಗತಿಕ ಮಟ್ಟದಲ್ಲಿ ಪ್ರವಾಹ, ಮತ್ತು ಚಂಡಮಾರುತದಿಂದಾಗಿ ಇಂಧನ ಉತ್ಪಾದನೆ ಶೇ.13ರಷ್ಟು ಕುಸಿದಿತ್ತು. ಹೀಗಾಗಿ ಕಚ್ಚಾ ತೈಲದ ದರ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆಯಾಗಿದೆ. ಆದರೆ ಮುಂದಿನ ತಿಂಗಳಲ್ಲಿ ಪರಿಸ್ಥಿತಿ ಸುಧಾರಿಸಲಿದ್ದು, ದರ ಇಳಿಕೆಯಾಗಲಿದೆ ಎಂದು ಅವರು ಹೇಳಿದರು.
ಪೆಟ್ರೋಲ್ ಡೀಸೆಲ್ ಗೂ ಜಿಎಸ್ ಟಿ ಜಾರಿಯಾದರೆ ತೈಲ ಕಂಪನಿಗಳಿಗೆ ಹೆಚ್ಚಿನ ಲಾಭವಾಗುತ್ತಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಅವರು, ''ಜಿಎಸ್‌ಟಿ ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ದರಗಳು ಬಂದರೆ ಗ್ರಾಹಕರಿಗೆ ಅನುಕೂಲವಾಗಲಿದೆ. ದರಗಳಲ್ಲಿ ಕಡಿತ ಉಂಟಾಗಲಿದೆ'' ಎಂದು ಅವರು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರದ "ನಿತ್ಯ ಇಂಧನ ದರ ಪರಿಷ್ಕರಣೆ" ಪದ್ಧತಿ ಜಾರಿ ಬಳಿಕ ಪೆಟ್ರೋಲ್, ಡೀಸೆಲ್ ದರಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.