ಭೂಗತ ಪಾತಕಿ ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ಬಂಧನ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಮುಂಬೈ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Published On :
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಮುಂಬೈ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಸುಲಿಗೆ ಪ್ರಕರಣದ ಆರೋಪದಡಿಯಲ್ಲಿ ಕೇಂದ್ರ ಮುಂಬೈನ ನಾಗಪಾದ್ ಪ್ರದೇಶದಲ್ಲಿರುವ ಇಕ್ಬಾಲ್ ಕಸ್ಕರ್ ನಿವಾಸದಿಂದಲೇ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಎನ್ ಕೌಂಟರ್ ಸ್ಪೆಷಲಿಸ್ಟ್ ಮತ್ತು ಸುಲಿಗೆ ನಿಗ್ರಹ ದಳದ ಹಿರಿಯ ಅಧಿಕಾರಿ ಇನ್ಸ್ ಪೆಕ್ಟರ್ ಪ್ರದೀಪ್ ಶರ್ಮಾ ಅವರ ನೇತೃತ್ವದಲ್ಲಿ ನಿನ್ನೆ ತಡರಾತ್ರಿ ದಾಳಿ ಮಾಡಲಾಗಿದ್ದು, ಅಜ್ಞಾತ ಸ್ಥಳದಲ್ಲಿ ಇಕ್ಬಾಲ್ ನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾಕರ ಮುಂಬೈನ ಥಾಣೆ ಮೂಲದ ಉದ್ಯಮಿಯೊಬ್ಬರಿಗೆ ಕೆಲ ಅನಾಮಧೇಯ ವ್ಯಕ್ತಿಗಳು ತಾವು ಇಕ್ಬಾಲ್ ಅನ್ಸಾರಿ ಹುಡುಗರು ಎಂದು ಹೇಳಿ ಬೆದರಿಕೆ ಕರೆಗಳನ್ನು ಮಾಡುತ್ತಿದ್ದರಂತೆ. ಈ ಬಗ್ಗೆ ಉದ್ಯಮಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಕ್ಬಾಲ್ ನನ್ನು ನಿನ್ನೆ ತಡರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
2003ರಲ್ಲಿ ಅಕ್ರಮ ಕಟ್ಟಡನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಇಯಿಂದ ಇಕ್ಬಾಲ್ ನನ್ನು ಗಡಿಪಾರು ಮಾಡಲಾಗಿತ್ತು. ಬಳಿಕ ಮುಂಬೈಗೆ ಬಂದು ನೆಲೆಸಿದ್ದ ಆತ ಕಾನೂನು ಹೋರಾಟ ಮಾಡಿ 2007ರಲ್ಲಿ ತನ್ನ ವಿರುದ್ಧ ಎಲ್ಲ ಆರೋಪಗಳಿಂದ ಮುಕ್ತನಾಗಿದ್ದ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
MumbaiಮುಂಬೈPoliceಪೊಲೀಸ್Dawood Ibrahimದಾವೂದ್ ಇಬ್ರಾಹಿಂಸುಲಿಗೆIqbal Kaskarಇಕ್ಬಾಲ್ ಕಸ್ಕರ್extortionಅಂಡರ್ ವರ್ಲ್ಡ್Under world
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.