ಬುಲೆಟ್ ಟ್ರೈನ್ ಸಾಲದ ಬಡ್ಡಿ ಪಾವತಿಗೆ ತೈಲ ಬೆಲೆ ಏರಿಕೆಯಾಗುತ್ತಿದೆಯಾ: ಶಿವಸೇನೆ ಪ್ರಶ್ನೆ
ತೈಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ, ಬುಲೆಟ್ ಟ್ರೈನ್ ಸಾಲದ ಬಡ್ಡಿ ಪಾವತಿಗಾಗಿ ತೈಲ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದೆ.

Published On :
ಮುಂಬೈ: ತೈಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ, ಬುಲೆಟ್ ಟ್ರೈನ್ ಸಾಲದ ಬಡ್ಡಿ ಪಾವತಿಗಾಗಿ ತೈಲ ಬೆಲೆಯನ್ನು ಏರಿಕೆ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದೆ.
ತೈಲ ಬೆಲೆ ಏರಿಕೆ ವಿರುದ್ಧ ಧ್ವನಿ ಎತ್ತಿದ್ದ ಶಿವಸೇನೆ, ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ತೈಲ ಬೆಲೆ ರೈತರ ಆತ್ಮಹತ್ಯೆಗೆ ಮುಖ್ಯ ಕಾರಣ ಎಂದು ಹೇಳಿತ್ತು. ಸರ್ಕಾರದಲ್ಲಿರುವವರು ಈ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ ಹಾಗು ಮಾತನಾಡುವವರಿಗೆ ಅವಕಾಶವನ್ನೂ ನೀಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ಈಗ ಸಾಮ್ನಾ ಪತ್ರಿಕೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ ತೈಲ ಬೆಲೆ ಏರಿಕೆಯಾಗುತ್ತಿರುವುದು ಬುಲೆಟ್ ರೈಲಿನ ಸಾಲದ ಬಡ್ಡಿ ಪಾವತಿಸುವುದಕ್ಕಾ? ಎಂದು ಪ್ರಶ್ನಿಸಿದೆ. ಇದೇ ವೇಳೆ ಪೆಟ್ರೋಲ್ ಗೆ ಖರ್ಚು ಮಾಡುವವರು ಉಪವಾಸವಿರುವುದಿಲ್ಲ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ ಬಗ್ಗೆಯೂ ಶಿವಸೇನೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸಚಿವರ ಹೇಳಿಕೆ ಬಡವರಿಗೆ ಅವಮಾನ ಮಾಡಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


