ಹೋಟೆಲ್ ಲಲಿತ್ ಮಹಲ್ ಅನ್ನು ಕರ್ನಾಟಕ ಸರ್ಕಾರದ ಸುಪರ್ದಿಗೆ ಒಪ್ಪಿಸಲು ಕೇಂದ್ರ ತೀರ್ಮಾನ
ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

Published On :
ವದೆಹಲಿ: ಮೈಸೂರಿನ ಐತಿಹಾಸಿಕ ಲಲಿತ ಮಹಲ್ ಪ್ಯಾಲೇಸ್ ಹೊಟೇಲ್ ನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
1931ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ನಿರ್ಮಿಸಿದ ಈ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ನಿರ್ವಹಣೆ ಮಾಡುತ್ತಿದ್ದವು. ಈಗ ಸಂಪೂರ್ಣವಾಗಿ ರಾಜ್ಯ ಸರ್ಕಾರಕ್ಕೆ ಹೋಟೇಲನ್ನು ಹಸ್ತಾಂತರಿಸಲಾಗುತ್ತದೆ ಎಂದು ಜೇಟ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದರ ಜತೆಗೆ ಐಟಿಡಿಸಿ ಆಡಳಿತದಲ್ಲಿದ್ದ ಹೋಟೆಲ್ ಜೈಪುರ್ ಅಶೋಕ್ ನ್ನು ರಾಜಸ್ಥಾನ ಸರಕಾರಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಈ ದಿನದ ಸಂಪುಟ ಸಭೆಯ ಇತರೆ ತೀರ್ಮಾನಗಳು:
ಕೇಂದ್ರ ರೈಲ್ವೇ ನೌಕರರಿಗೆ ದಸರಾ ಉಡುಗೊರೆಯಾಗಿ ಬೋನಸ್ ಘೋಷಣೆ.
ಜಮ್ಮು ಕಾಶ್ಮೀರದ ವಿಶೇಷ ಕೈಗಾರಿಗೆ ಉತ್ತೇಜನ ಯೋಜನೆಗೆ ಅನುಮೋದನೆ.
ಉಡಾನ್ ಯೋಜನೆಯ ಅವಧಿ ಡಿ. 31ರವೆರೆಗೆ ವಿಸ್ತರಣೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
mysoreಮೈಸೂರುKarnataka State GovernmentFinance Minister Arun Jaitleyಕರ್ನಾಟಕ ರಾಜ್ಯ ಸರ್ಕಾರಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್Lalit Mahal Palace Hotelಹಣಕಾಸು ಸಚಿವ ಅರುಣ್ ಜೇಟ್ಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


