ಹಣ ಸುಲಿಗೆ ಪ್ರಕರಣ: ದಾವೂದ್ ಸಹೋದರ, ಇಬ್ಬರು ಸಹಚರರು 8 ದಿನ ಪೊಲೀಸ್ ವಶಕ್ಕೆ
ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು...

Published On :
ಥಾಣೆ: ಹಲ್ಲೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್'ನನ್ನು ಪೊಲೀಸರು 8 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದಾರೆ.
ಇಕ್ಬಾಲ್ ಜೊತೆಗೆ ಆತನ ಇಬ್ಬರು ಸಹಚರರಿಗೂ 8 ದಿನಗಳ ಕಾಲ ಪೊಲೀಸರು ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ಥಾಣೆಯಲ್ಲಿನ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಣೆ ಪೊಲೀಸ್ ಅಧಿಕಾರಿಗಳು ದಕ್ಷಿಣ ಮುಂಬೈನ ನಾಗ್ಪದದಲ್ಲಿನ ಕಸ್ಕರ್'ನ ನಿವಾಸದ ಮೇಲೆ ನಿನ್ನೆ ದಾಳಿ ನಡೆಸಿದ್ದರು. ಈ ವೇಳೆ ದಾವೂದ್ ಸಹೋದನನ್ನು ಬಂಧನಕ್ಕೊಳಪಡಿಸಿದ್ದರು.
ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಕಸ್ಕರ್ ನನ್ನು ವಿಚಾರಣೆ ನಡೆಸವ ಅಗತ್ಯವಿದ್ದು, ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿತ್ತು. ಇದರಂತೆ ನ್ಯಾಯಾಲಯದ ಕಸ್ಕರ್ ಹಾಗೂ ಆತನ ಇಬ್ಬರು ಸಹಚರರನ್ನು 8 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


