ಎಂಎಸ್ ಧೋನಿಗೂ ರಾಹುಲ್ ಗಾಂಧಿಗೂ ಇರುವ ಸಾಮ್ಯತೆ ಏನು? ರಮ್ಯಾ ಫೇಸ್ ಬುಕ್ ಪೋಸ್ಟ್, ಟ್ರೋಲ್
ನಟಿ, ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ...

Published On :
ನಟಿ, ಮಾಜಿ ಸಂಸದೆ ಹಾಗೂ ಎಐಸಿಸಿ ಸಾಮಾಜಿಕ ಜಾಲತಾಣ ಮೇಲ್ವಿಚಾರಕಿ ರಮ್ಯಾ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇರುತ್ತಾರೆ.
ಇದೀಗ ರಮ್ಯಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಗೂ ಇರುವ ಸಾಮ್ಯತೆ ಏನು? ಇವರಿಬ್ಬರನ್ನೂ ದೂಷಿಸುವವರು ತುಂಬಾ ಇದ್ದರು. ಆದರೆ ಅವರಿಬ್ಬರೂ ಮರಳಿ ಒಂದು ಭದ್ರವಾಗಿ ನೆಲೆಯೂರಿದ್ದಾರೆ ಎಂದು ಫೇಸ್ ಬುಕ್ ನಲ್ಲಿ ಫೋಟೋವನ್ನು ಅಪ್ ಲೋಡ್ ಮಾಡಿದ್ದಾರೆ. ಈ ಫೋಟೋ ಇದೀಗ ವೈರಲ್ ಆಗಿದ್ದು ನೆಟಿಜನ್ ಗಳು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.
ಇದು ವಾಟ್ಸ್ ಆ್ಯಪ್ ನಲ್ಲಿ ಬಂದ ಫಾರ್ವರ್ಡ್ ಮೆಸೇಜ್ ಎಂಬ ಒಕ್ಕಣೆಯೊಂದಿಗೆ ರಮ್ಯಾ ಈ ಫೋಸ್ಟ್ ಹಾಕಿದ್ದಾರೆ.
ಎಂಎಸ್ ಧೋನಿಗೂ ರಾಹುಲ್ ಗಾಂಧಿಗೂ ಹೋಲಿಕೆ ಮಾಡಬೇಡಿ ಎಂದು ಹಲವಾರು ಪೋಸ್ಟ್ ಗೆ ಕಮೆಂಟ್ ಮಾಡಿದ್ದಾರೆ. ಇದೇ ಅಲ್ಲದೆ ಕೆಲವರು ತಮಾಷೆಯ ಉತ್ತರಗಳನ್ನು ನೀಡಿ ಟ್ರೋಲ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


