ಕಾವೇರಿ ವಿಚಾರದಲ್ಲಿ ಕೇಂದ್ರದ ಮೇಲೆ ನಂಬಿಕೆ ಇಲ್ಲ: ಸುಪ್ರೀಂಗೆ ತಮಿಳುನಾಡು
ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರವನ್ನು ನಂಬುವುದಿಲ್ಲ ಎಂದು ತಮಿಳುನಾಡು ಸರ್ಕಾರ ಬುಧವಾರ...

Published On :
ನವದೆಹಲಿ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ನಾವು ಕೇಂದ್ರ ಸರ್ಕಾರವನ್ನು ನಂಬುವುದಿಲ್ಲ ಎಂದು ತಮಿಳುನಾಡು ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಕಾವೇರಿ ನ್ಯಾಯಾಧಿಕರಣ ತೀರ್ಪು ಪ್ರಶ್ನಿಸಿ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ, ಕೇಂದ್ರ ಸರ್ಕಾರ ತನ್ನ ಗೆಜೆಟ್ ನಲ್ಲಿ ಕಾವೇರಿ ನ್ಯಾಯಾಧೀಕರಣದ ಆದೇಶ ಪ್ರಕಟಿಸಲು ಆರು ವರ್ಷ ತೆಗೆದುಕೊಂಡಿದೆ. ಅಲ್ಲದೆ ಕಾವೇರಿ ನಿರ್ವಹಣಾ ಮಂಡಳಿಯನ್ನೂ ರಚನೆ ಮಾಡಿಲ್ಲ ಎಂದು ತಮಿಳುನಾಡು ವಾದ ಮಂಡಿಸಿದೆ.
ಕರ್ನಾಟಕ ಕಾವೇರಿ ನದಿ ನೀರಿನ್ನು ತನ್ನ ಮನಸಿಗೆ ಬಂದಂತೆ ಬಳಸಿಕೊಳ್ಳುವ ಮೂಲಕ 2007ರ ಕಾವೇರಿ ನ್ಯಾಯಾಧೀಕರಣದ ಆದೇಶವನ್ನು ಉಲ್ಲಂಘಿಸಿದೆ ಮತ್ತು ಕೇಂದ್ರ ಸರ್ಕಾರ ಸಹ ಕಾವೇರಿ ನ್ಯಾಯಾಧೀಕರಣದ ಆದೇಶವನ್ನು ಇದುವರೆಗೂ ಜಾರಿಗೆ ತಂದಿಲ್ಲ ಎಂದು ತಮಿಳುನಾಡು ಆರೋಪಿಸಿದೆ.
ತಮಿಳುನಾಡು ಪರ ವಾದ ಮಂಡಿಸಿದ ಹಿರಿಯ ವಕೀಲ ಶೇಖರ್ ನೆಫಾಡೆ ಅವರು, ಕಾವೇರಿ ನ್ಯಾಯಾಧೀಕರಣದ ಆದೇಶ ಜಾರಿಗೊಳಿಸಲು ಸಮಯ ನಿಗದಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಾಮೂರ್ತಿ ಅಮಿತವ ರಾಯ್ ಮತ್ತು ನ್ಯಾಯಮೂರ್ತಿ ಎ.ಎಂ.ಖನ್ವಿಲ್ಕರ್ ಅವರನ್ನೊಳಗೊಂಡ ಪೀಠಕ್ಕೆ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


