ಜಮ್ಮು-ಕಾಶ್ಮೀರ: ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ...

Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಗುರುವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಆರ್'ಎಸ್ ಪುರ ಸೆಕ್ಟರ್ ಬಳಿ ಮಧ್ಯರಾತ್ರಿಯಿಂದಲೇ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಸಣ್ಣ ಶಸ್ತ್ರಾಸ್ತ್ರ ಮತ್ತು ಮಾರ್ಟರ್ ಶೆಲ್ ಗಳಿಂದ ಅಪ್ರಚೋದಿತ ದಾಳಿ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ಹೆದ್ದಾರಿಯ ಜವಾಹರ್ ಸುರಂಗ ಮಾರ್ಗ ಬಳಿಯಿರುವ ಗುಪ್ತಚರ ಇಲಾಖೆಯ ಸಶಸ್ತ್ರ ಸೀಮಾ ಬಲ (ಎಸ್ಎಸ್'ಬಿ) ಯೋಧರ ಕ್ಯಾಂಪ್ ಮೇಲೆ ನಿನ್ನೆಯಷ್ಟೇ ದಾಳಿ ನಡೆಸಿತ್ತು. ಈ ವೇಳೆ ಸಶಸ್ತ್ರ ಸೀಮಾ ದಳದ ಅಧಿಕಾರಿ ಸೇರಿ ಇಬ್ಬರು ಹುತಾತ್ಮರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian ArmyPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರCeasefire ViolationJammu and Kashmirಕದನ ವಿರಾಮ ಉಲ್ಲಂಘನೆಭಾರತೀಯ ಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


