ತ್ರಿಪುರ ಗಲಭೆ ವರದಿಗೆ ತೆರಳಿದ್ದ ಪತ್ರಕರ್ತನ ಕೊಲೆ!
ತ್ರಿಪುರಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಗಲಭೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಸ್ಥಳೀಯ ಪತ್ರಕರ್ತನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

Published On :
ಅಗರ್ತಲಾ: ತ್ರಿಪುರಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಗಲಭೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ಸ್ಥಳೀಯ ಪತ್ರಕರ್ತನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಇಂಡಿಜಿನಿಯಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (IPFT)ಮತ್ತು ತ್ರಿಪುರಾದ ಆಡಳಿತಾ ರೂಢ ಸಿಪಿಐಎಂನ ಯುವ ಘಟಕ ಗಣ ಮುಕ್ತಿ ಪರಿಷತ್ ಕಾರ್ಯಕರ್ತರ ನಡುವೆ ನಡೆದ ಸಂಘರ್ಷ ಇದೀಗ ತಾರಕಕ್ಕೇರಿದ್ದು, ತ್ರಿಪುರಾದ ಮಂಡೈನಲ್ಲಿ ಹಿಂಸಾಚಾರಕ್ಕೆ ತಿರುಗಿದೆ. ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿ ಮಾಡಿಲಾಗಿದೆ. ಈ ಬೆಳವಣಿಗೆಗಳನ್ನು ವರದಿ ಮಾಡಲೆಂದು ಸ್ಥಳೀಯ ದಿನ್ ರಾತ್ ಸುದ್ದಿ ವಾಹಿನಿಯ ಪತ್ರಕರ್ತ ಸಂತನ ಭೌಮಿಕ್ ಎಂಬಾತ ತೆರಳಿದ್ದು, ನಿನ್ನೆ ರಾತ್ರಿ ಕರ್ತವ್ಯನಿರತನಾಗಿದ್ದ ಆತನನ್ನು ಪ್ರತಿಭಟನಾ ನಿರತ ಕಾರ್ಯಕರ್ತರು ಅಪಹರಣ ಮಾಡಿ ಭೀಕರವಾಗಿ ಕೊಲೆಗೈದಿದ್ದಾರೆ.
ಭೌಮಿಕ್ ನನ್ನು ಹಿಂದಿನಿಂದ ಹೊಡೆದ ದಷ್ಕರ್ಮಿಗಳು ಬಳಿಕ ಆತನನ್ನು ಅಪಹರಣ ಮಾಡಿ ಆತನೆ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ. ಭೌಮಿಕ್ ನನ್ನು ಚಾಕುವಿನಿಂದ ಹಲವು ಭಾರಿ ಇರಿಯಲಾಗಿದ್ದು, ರಕ್ತದ ಮಡುವಿನಲ್ಲಿ ಬಿದಿದ್ದ ಭೌಮಿಕ್ ನನ್ನು ಕೂಡಲೇ ಸ್ಥಳೀಯರು ಅಗರ್ತಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಲು ಕೊಂಡೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಪತ್ರಕರ್ತ ಭೌಮಿಕ್ ಸಾವಿಗೆ ಸಂಬಂಧಿಸಿದಂತೆ ವಿಪಕ್ಷಗಳು ಸರ್ಕಾರನವನ್ನು ತರಾಟೆಗೆ ತೆಗೆದುಕೊಂಡಿವೆ. ಅಂತೆಯೇ ತ್ರಿಪುರಾದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಚಿವ ಭಾನುಲಾಲ್ ಸಹಾ ಅವರೂ ಕೂಡ ಘಟನೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ತ್ರಿಪುರಾ ಪೊಲೀಸರು ಈಗಾಗಲೇ ನಾಲ್ವರು ಐಪಿಎಫ್‌ಟಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.