ಸುನಂದಾ ಪುಷ್ಕರ್ ಸಾವು ಪ್ರಕರಣ: ಅಂತಿಮ ವರದಿ ಸಲ್ಲಿಸಲು ಪೊಲೀಸರಿಗೆ ಹೆಚ್ಚಿನ ಕಾಲಾವಕಾಶ
ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣದ ಅಂತಿಮ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಹೆಚ್ಚಿನ...

Published On :
ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ಸಾವು ಪ್ರಕರಣದ ಅಂತಿಮ ವರದಿ ಸಲ್ಲಿಸಲು ದೆಹಲಿ ಹೈಕೋರ್ಟ್ ದೆಹಲಿ ಪೊಲೀಸರಿಗೆ ಹೆಚ್ಚಿನ ಕಾಲಾವಕಾಶವನ್ನು ನೀಡಿದೆ.
ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಲು ದೆಹಲಿ ಪೊಲೀಸರಿಗೆ ಹೈಕೋರ್ಟ್ 8 ವಾರ(2 ತಿಂಗಳ)ಗಳ ಕಾಲಾವಕಾಶವನ್ನು ನೀಡಿದೆ.
ಹಿಂದಿನ ವಿಚಾರಣೆಯಲ್ಲಿ ದೆಹಲಿಯ ಹೈಕೋರ್ಟ್ ಮಂದಗತಿಯ ವಿಚಾರಣೆ ಕುರಿತಂತೆ ದೆಹಲಿ ಪೊಲೀಸರ ಕಾರ್ಯವೈಖರಿಯನ್ನು ಟೀಕಿಸಿತ್ತು. ಅಲ್ಲದೆ ವಿಚಾರಣೆಯನ್ನು ಶೀಘ್ರಗತಿಯಲ್ಲಿ ಮುಗಿಸಿ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಿತ್ತು.
2014 ಜನವರಿ 17ರಂದು ರಾತ್ರಿ ದಕ್ಷಿಣ ದೆಹಲಿಯ ಸ್ಟಾರ್ ಹೊಟೇಲ್ ವೊಂದರಲ್ಲಿ ಸುನಂದಾ ಪುಷ್ಕರ್ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ನಡೆದು ಮೂರುವರೆ ವರ್ಷವಾಗಿದ್ದರು ಅಂತಿಮ ವರದಿ ಸಲ್ಲಿಸಲು ದೆಹಲಿ ಪೊಲೀಸರಿಗೆ ಇನ್ನು ಸಾಧ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


