ಅಖಿಲೇಶ್ ಯಾದವ್ ಖಿನ್ನತೆಯಿಂದ ಬಳಲುತ್ತಿದ್ದಾರೆ: ಯುಪಿ ಡಿಸಿಎಂ ಟೀಕೆ
ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ...

Published On :
ನವದೆಹಲಿ: ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಟೀಕಿಸಿದ್ದಾರೆ.
ಬಿಜೆಪಿಯ ಹಲವು ಮುಖಂಡರು ಅತ್ಯಾಚಾರಿ ಬಾಬಾ ಗುರ್ಮಿತ್ ರಾಮ್ ರಹೀಂ ಸಿಂಗ್ ಅವರ ಜೊತೆ ಸಂಪರ್ಕ ಇಟ್ಟಿ ಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಮುಖಂಡರು ಡೇರಾ ಮುಖ್ಯಸ್ಥನ ಜೊತೆ ತೆಗೆಸಿಕೊಂಡಿರುವ ಫೋಟೋಗಳು ಸಾಕ್ಷಿಯಾಗಿವೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದರು.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಶವ ಪ್ರಸಾದ್ ಮೌರ್ಯ, ಇವುಗಳನ್ನೆಲ್ಲಾ ಬಿಜೆಪಿ ನಂಬುವುದಿಲ್ಲ, ಯೋಗಿ ಆದಿತ್ಯನಾಥ್ ಸರ್ಕಾರ ರಾಜ್ಯದೆಲ್ಲೆಡೆ ಏಕ ರೂಪದ ಅಭಿವೃದ್ಧಿಗೆ ಗಮನ ಹರಿಸುತ್ತಿದೆ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರದ ಆರು ತಿಂಗಳ ಅಢಳಿತಾವಧಿಯಲ್ಲಿ ರಾಜ್ಯದಲ್ಲಿ ಎಲ್ಲಿಯೂ ವಿಐಪಿ ಸಂಸ್ಕೃತಿ ಪ್ರದರ್ಶಿಸಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶAkhilesh Yadavಅಖಿಲೇಶ್ ಯಾದವ್Depressionಖಿನ್ನತೆKeshav Prasad Mauryaಕೇಶವ್ ಪ್ರಸಾದ್ ಮೌರ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


