ಬಿಜೆಪಿ ಮುಖಂಡನ ಕೊಲೆ ಪ್ರಕರಣ: ಮಾಜಿ ಕಬಡ್ಡಿ ಆಟಗಾರನ ಬಂಧನ
ಘಾಜಿಯಾಬಾದ್ ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಮಟ್ಟದ ಮಾಜಿ ಕಬಡ್ಡಿ ಆಟಗಾರನನ್ನು ಪೊಲೀಸರು ...

Published On :
ನವದೆಹಲಿ: ಘಾಜಿಯಾಬಾದ್ ಬಿಜೆಪಿ ಮುಖಂಡನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಾರಾಷ್ಟ್ರೀಯ ಮಟ್ಟದ ಮಾಜಿ ಕಬಡ್ಡಿ ಆಟಗಾರನನ್ನು ಪೊಲೀಸರು ಬಂಧಿಸಿದ್ದಾರೆ.
ರಾಜು ಕುಮಾರ್ ಅಲಿಯಾಸ್ ರಾಜು ಪೆಹಲ್ವಾನ್ ನನ್ನು ನಿನ್ನೆ ಪೊಲೀಸರು ದೆಹಲಿ ಹೊರವಲಯದಲ್ಲಿ ಬಂಧಿಸಿದ್ದಾರೆ.
ಸೆಪ್ಟಂಬರ್ 2 ರಂದು ಇಬ್ಬರು ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸ್ಥಳೀಯ ಬಿಜೆಪಿ ಮುಖಂಡ ಗಜೇಂದ್ರ ಭಾಟಿಯನ್ನು ಕೊಲ್ಲಲಾಗಿತ್ತು, ಆತನ ಸಹಚರ ಬಲ್ಬೀರ್ ಸಿಂಗ್ ಚೌಹಾಣ್ ಗಾಯಗೊಂಡಿದ್ದರು.
ಸೆಪ್ಟಂಬರ್ 11 ರಂದು, ಉತ್ತರ ಪ್ರದೇಶ ಪೊಲೀಸರು ನರೇಂದರ್ ಅಲಿಯಾಸ್ ಫೌಜಿ ಎಂಬಾತನನ್ನು ಬಂಧಿಸಿದ್ದರು. ನಂತರ ಆತನನ್ನು ವಿಚಾರಣೆ ನಡೆಸಿದಾಗ ಆತ ನೀಡಿದ ಮಾಹಿತಿಯಂತೆ ಪೆಹಲ್ವಾನ್ ಕೂಡ ಕೊಲೆಯಲ್ಲಿ ಭಾಗಿಯಾಗಿದ್ದಾನೆಂಬ ಮಾಹಿತಿ ಆಧರಿಸಿ ಪೊಲೀಸರು ಆಈತನನ್ನು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


