ದಾವೂದ್ ಪತ್ನಿ ಮುಂಬೈ ಗೆ ಭೇಟಿ ಕೊಟ್ಟಾಗ ಮೋದಿ ಸರ್ಕಾರ ನಿದ್ದೆ ಮಾಡ್ತಿತ್ತು: ಕಾಂಗ್ರೆಸ್ ಟೀಕೆ
ದಾವೂದ್ ಇಬ್ರಾಹಿಂ ಪತ್ನಿ ತನ್ನ ತಂದೆಯನ್ನು ಭೇಟಿ ಮಾಡಲು ಕಳೆದ ವರ್ಷ ಮುಂಬೈ ಗೆ ಬಂದಿದ್ದ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

Published On :
ನವದೆಹಲಿ: ದಾವೂದ್ ಇಬ್ರಾಹಿಂ ಪತ್ನಿ ತನ್ನ ತಂದೆಯನ್ನು ಭೇಟಿ ಮಾಡಲು ಕಳೆದ ವರ್ಷ ಮುಂಬೈ ಗೆ ಬಂದಿದ್ದ ಮಾಹಿತಿ ಬಹಿರಂಗವಾಗುತ್ತಿದ್ದಂತೆಯೇ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಇಬ್ರಾಹಿಂ ಪತ್ನಿ ಮೆಹಜಾಬಿನ್ ಶೇಖ್ 2016 ರಲ್ಲಿ ಮುಂಬೈ ಗೆ ಭೇಟಿ ನೀಡಿದ್ದರು. ಆದರೆ ಮೋದಿ ಸರ್ಕಾರ ಮಾತ್ರ ನಿದ್ರಿಸುತ್ತಿತ್ತು ಎಂದು ಕಾಂಗ್ರೆಸ್ ನ ನಾಯಕ ರಣ್ದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ. ರಾ, ಸಿಬಿಐ ತನಿಖಾ ಸಂಸ್ಥೆಗಳು ಏನು ಮಾಡುತ್ತಿದ್ದವು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿ ಸರ್ಕಾರ ದಾವೂದ್ ಇಬ್ರಾಹಿಂ ಪತ್ನಿಯನ್ನು ಏಕೆ ಬಂಧಿಸಿಲ್ಲ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ರಾಜನಾಥ್ ಸಿಂಗ್ ಉತ್ತರಿಸಬೇಕು ಎಂದು ರಣ್ದೀಪ್ ಸಿಂಗ್ ಸುರ್ಜೆವಾಲ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಮುಂಬೈModi governmentಮೋದಿ ಸರ್ಕಾರMumbai visitDawood Ibrahims wifeದಾವೂದ್ ಇಬ್ರಾಹಿಂ ಪತ್ನಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


