ದೇಶ

ಗಡಿಯಲ್ಲಿ ಪಾಕ್ ಅಪ್ರಚೋದಿತ ದಾಳಿ, 2 ಬಿಎಸ್ಎಫ್ ಯೋಧರು ಸೇರಿ 7 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಪೂಂಚ್ ಜಿಲ್ಲೆಯಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಇಬ್ಬರು ಬಿಎಸ್ಎಫ್ ಯೋಧರು ಸೇರಿ 7 ಮಂದಿಗೆ...

ಗಡಿಯಲ್ಲಿ ಪಾಕ್ ಅಪ್ರಚೋದಿತ ದಾಳಿ, 2 ಬಿಎಸ್ಎಫ್ ಯೋಧರು ಸೇರಿ 7 ಜನರಿಗೆ ಗಾಯ
ಸಂಗ್ರಹ ಚಿತ್ರ
Published On :
ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಮತ್ತು ಪೂಂಚ್ ಜಿಲ್ಲೆಯಗಳ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಇಬ್ಬರು ಬಿಎಸ್ಎಫ್ ಯೋಧರು ಸೇರಿ 7 ಮಂದಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. 
ಜಮ್ಮುವಿನ ಸಾಂಬಾ ಮತ್ತು ಪೂಂಚ್ ಜಿಲ್ಲೆಗಳಲ್ಲಿರುವ ಸೇನಾ ಶಿಬಿರಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಕಳೆದ ರಾತ್ರಿಯಿಂದಲೂ ಅಪ್ರಚೋದಿತ ಗುಂಡು ಹಾಗೂ ಶೆಲ್ ಗಳಿಂದ ದಾಳಿ ನಡೆಸುತ್ತಿದ್ದು, ಪರಿಣಾಮ ಇಬ್ಬರು ಬಿಎಸ್ಎಫ್ ಯೋಧರು ಹಾಗೂ ಐವರು ನಾಗರೀಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಜಮ್ಮುವಿನ ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಎಡೆಬಿಡದೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದರಿಂದ ಗಡಿಯಲ್ಲಿರುವ ನೂರಾರು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 
ಅರ್ನಿಯಾ ಸೆಕ್ಟರ್, ಆರ್'ಎಸ್ ಪುರ ಮತ್ತು ರಾಮ್ಗಢ್ ಸೆಕ್ಟರ್ ಸೇರದಂತೆ ಜಮ್ಮುವಿನ ಅಂತರಾಷ್ಟ್ರೀಯ ಗಡಿ ಹಾಗೂ ಸಾಂಬಾ ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದಲೇ 20 ಗ್ರಾಮಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದೆ. ಪರಿಣಾಮ ಆರ್'ಎಸ್ ಪುರ ಸೆಕ್ಟರ್ ಬಳಿಯಿರುವ ಸತೊವಾಲಿ ಗ್ರಾಮದಲ್ಲಿ ಮೂವರು ನಾಗರೀಕರು, ಅರ್ನಿಯಾ ಸೆಕ್ಟರ್ ಬಳಿಯಿರುವ ತ್ರೆವಾದಲ್ಲಿ ಓರ್ವ ನಾಗರೀಕ, ಪೂಂಜ್ ಸೆಕ್ಟರ್ ಬಳಿ 8 ವರ್ಷದ ಬಾಲಕ ಗಾಯಗೊಂಡಿದ್ದರು. ಗಾಯಗೊಂಡ ಎಲ್ಲಾ ನಾಗರೀಕರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಮ್ಗಢ್ ಸೆಕ್ಟರ್ ನ ಸಾಂಬಾ ಬಳಿ ಇಬ್ಬರು ಬಿಎಸ್ಎಫ್ ಯೋಧರಿಗೆ ಗಾಯಗಳಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಪರಿಣಾಮ ಗಡಿಯಲ್ಲಿರುವ 500ಕ್ಕೂ ಹೆಚ್ಚು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಅರ್ನಿಯಾ ಹಾಗೂ ಆರ್'ಎಸ್ ಪುರ ಸೆಕ್ಟರ್ ಬಳಿ ಕೆಲ ದಿನಗಳ ಹಿಂದಷ್ಟೇ 20,000ಕ್ಕೂ ಹೆಚ್ಚು ಜನರು ಗಡಿ ತೊರೆದಿದ್ದಾರೆ. 
ದಿನದಿಂದ ದಿನಕ್ಕೆ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಉದ್ಧಟನದ ಹೆಚ್ಚುತ್ತಲೇ ಇದೆ. ಸೇನೆ ಮಾಹಿತಿ ನೀಡಿರುವಂತೆ ಪ್ರಸಕ್ತ ವರ್ಷ ಆಗಸ್ಟ್ 1 ರವರೆಗೆ ಪಾಕಿಸ್ತಾನ 285 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಕಳೆದ ವರ್ಷ ಇದರ ಸಂಖ್ಯೆ 226ರಷ್ಟಿತ್ತು ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.