ಅತ್ಯಾಚಾರ ಪ್ರಕರಣ: 'ಚೆನ್ನೈ ಎಕ್ಸ್ ಪ್ರೆಸ್' ನಿರ್ಮಾಪಕ ಕರೀಂ ಮೊರಾನಿ ಬಂಧನ
5 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಬಾಲಿವುಡ್ ನಿರ್ಮಾಪಕ ಕರೀಂ ಮೊರಾನಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.

Published On :
ಹೈದರಾಬಾದ್: 25 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಬಾಲಿವುಡ್ ನಿರ್ಮಾಪಕ ಕರೀಂ ಮೊರಾನಿಯನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.
ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ಎಂದು ಯುವತಿ ಕರೀಂ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಅತ್ಯಾಚಾರ ಆರೋಪ ಕೇಳಿ ಬಂದಾಗ ಮೊರಾನಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈದರಾಬಾದ್ ಉಚ್ಚ ನ್ಯಾಯಾಲಯ ತಳ್ಳಿ ಹಾಕಿತ್ತು. ಆ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಮೊರಾನಿ ಹೈದರಾಬಾದ್ ನ ಹಯಾತ್‍ನಗರ್ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದರು.
"ಮೊರಾನಿ ಅವರನ್ನು ಬಂಧಿಸಲಾಗಿದ್ದು ವೈದ್ಯಕೀಯ ತಪಾಸಣೆಗೊಳಪಡಿಸಿದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು" ಎಂದು ಹಯಾತ್‍ನಗರ್ ಪೊಲೀಸ್ ಅಧಿಕಾರಿ ಜೆ. ನರೇಂದರ್ ಗೌಡ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
ಪ್ರಕರಣದ ಹಿನ್ನೆಲೆ
ಮದುವೆಯಾಗುವುದಾಗಿ ನಂಬಿಸಿ ಮೊರಾನಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದಾರೆ ಎಂದು ಜನವರಿಯಲ್ಲಿ ಯುವತಿ ಹಯಾತ್‍ನಗರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು.
2015 ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಅವಧಿಯಲ್ಲಿ ಮೊರಾನಿ ಮುಂಬೈನಲ್ಲಿ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿಯೂ ಎರಡು ಬಾರಿ ತನ್ನ ಮೇಲೆ ಅತ್ಯಾಚಾರ ನಡೆದಿದೆ. ಅಷ್ಟೇ ಅಲ್ಲದೆ ಮೊರಾವಿ ತನ್ನ ನಗ್ನ ಚಿತ್ರಗಳನ್ನು ಮತ್ತು ವಿಡಿಯೊಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದು, ಅದನ್ನು ಗೆಳೆಯರಿಗೆ ಕಳಿಸುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಯುವತಿ ದೂರಿನಲ್ಲಿ ಹೇಳಿದ್ದಾಳೆ.
ಮೊರಾನಿ ವಿರುದ್ಧ ಅತ್ಯಾಚಾರ, ಮೋಸ ಮತ್ತು ಬೆದರಿಕೆಯೊಡ್ಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ದೆಹಲಿಯಲ್ಲಿ ಬಿಬಿಎ ಪದವಿ ಮಾಡಿಕೊಂಡಿದ್ದಾಳೆ.
ಮುಂಬೈನಲ್ಲಿ ರಂಗಭೂಮಿ ಕಲಾವಿದೆಯಾಗಿರುವ ಮೊರಾನಿ ಮಗಳ ಮೂಲಕ ಈತನ ಪರಿಚಯ ಆಗಿತ್ತು.
ಮೊರಾನಿ, ಶಾರುಖ್ ಖಾನ್ ನಾಯಕನಾಗಿದ್ದ ಚೆನ್ನೈ ಎಕ್ಸ್ ಪ್ರೆಸ್, ದಿಲ್ ವಾಲೆ, ಹ್ಯಾಪಿ ನ್ಯೂಇಯರ್ ಮತ್ತು ರಾ ಒನ್ ಮೊದಲಾದ ಹಿಟ್ ಚಿತ್ರಗಳ ನಿರ್ಮಾಪಕರಾಗಿದ್ದಾರೆ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


