ಬಿಹೆಚ್ ಯು ಲೈಂಗಿಕ ಕಿರುಕುಳ ಪ್ರಕರಣ: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪೊಲೀಸ್ ಲಾಠಿ ಚಾರ್ಜ್
ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

Published On :
ವಾರಾಣಸಿ: ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳನ್ನು ಜುಟ್ಟು ಹಿಡಿದು ಎಳೆದೊಯ್ದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೆ ಸ್ಥಳದಲ್ಲಿಯೇ ಇದ್ದ ವಾರಾಣಸಿ ಡಿಎಂ ಈ ಆರೋಪವನ್ನು ನಿರಾಕರಿಸಿದ್ದಾರೆ.
ವಿಶ್ವವಿದ್ಯಾನಿಲಯದ ಕ್ಯಾಂಪಸ್ ಹೊರಗೆ ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ವಿಶ್ವವಿದ್ಯಾನಿಲಯದಲ್ಲಿ ಸಂಬಂಧಿಸಿದವರಿಗೆ ದೂರು ನೀಡಲು ಹೋದರೆ ಕ್ರಮ ಕೈಗೊಳ್ಳುವುದರ ಬದಲು ವಿದ್ಯಾರ್ಥಿ ಹಾಸ್ಟೆಲ್ ಗೆ ಹೋಗಿ ಬರುವ ವೇಳೆಯನ್ನು ಪ್ರಶ್ನಿಸಿ ಅವಹೇಳನ ಮಾಡಿದ್ದಾರೆ. ವಿವಿಯ ನಡೆಗೆ ಆಕ್ರೋಶ ವ್ಯಕ್ತಪಾಡಿಸಿರುವ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ಲಾಠಿ ಚಾರ್ಜ್ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


