ದೇಶ

ಸೊಪೋರ್'ನಲ್ಲಿ ಗ್ರೆನೇಡ್ ದಾಳಿ: 3 ನಾಗರೀಕರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿರುವ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಸೊಪೋರ್'ನಲ್ಲಿ ಗ್ರೆನೇಡ್ ದಾಳಿ: 3 ನಾಗರೀಕರಿಗೆ ಗಾಯ
ಸಂಗ್ರಹ ಚಿತ್ರ
Published On :
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿರುವ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಸೊಪೋರ್ ನ ಮಾರುಕಟ್ಟೆ ಪ್ರದೇಶದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಮೂವರು ಪಾದಚಾರಿಗಳಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಕಳೆದೆರಡು ದಿನಗಳ ಹಿಂದಷ್ಟೇ ದಕ್ಷಿಣ ಕಾಶ್ಮೀರದ ಟ್ರಾಲ್ ಪಟ್ಟಣದಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ದಾಳಿಯಲ್ಲು ಮೂವರು ನಾಗರೀಕರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. 
ಪಿಡಿಪಿ ಸಚಿವ ನಯೀಮ್ ಅಕ್ತರ್ ಅವರು ಕಾರ್ಯಕ್ರಮವೊಂದರ ಉದ್ಘಾಟನೆಗಾಗಿ ಟ್ರಾಲ್ ಗೆ ಕಳೆದ ಗುರುವಾರ ಭೇಟಿ ನೀಡಿದ್ದರು. ಸಚಿವರ ಭೇಟಿ ನಿಮಿತ್ತ ಟ್ರಾಲ್ ನಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು. ಬಿಗಿ ಭದ್ರತೆಯ ನಡುವೆಯೂ ಸೇನಾಪಡೆಗಳ ಕಣ್ಣು ತಪ್ಪಿಸಿ ಮೆರವಣಿಗೆ ಸಾಗುವ ಹಾದಿಯಲ್ಲಿ ಉಗ್ರರು ಗ್ರೆನೇಡ್ ನ್ನು ಹುದುಗಿಸಿಟ್ಟಿದ್ದರು. ಘಟನೆಯಲ್ಲಿ ಸಚಿವ ಅಕ್ತರ್ ಅವರು ಅಪಾಯದಿಂದ ಪಾರಾಗಿದ್ದು, ಆದರೆ, ಅವರ ಕಾರು ಚಾಲಕನಿಗೆ ಗಾಯಗಳಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.