ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ
ಅಪಘಾತವಾಗಿ ಸಾವುನೋವಿನ ನಡುವೆ ಒದ್ದಾಡುತ್ತಿದ್ದ ಗಾಯಾಳು ಓರ್ವನನ್ನು ಉತ್ತರ ಪ್ರದೇಶ ಶಾಸಕರೊಬ್ಬರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

Published On :
ಫರೂಖಾಬಾದ್: ಅಪಘಾತವಾಗಿ ಸಾವು-ನೋವಿನ ನಡುವೆ ಒದ್ದಾಡುತ್ತಿದ್ದ ಗಾಯಾಳು ಓರ್ವನನ್ನು ಉತ್ತರ ಪ್ರದೇಶ ಶಾಸಕರೊಬ್ಬರು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಫಾರೂಖಾಬಾದ್-ಫತೇಘರ್ ರಸ್ತೆಯಲ್ಲಿ ಬೈಕ್ ಮತ್ತು ಸೈಕಲ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಯಗೊಂಡಿದ್ದರು. ಅಲ್ಲದೆ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದಿದ್ದರೂ ಕೂಡ ಅವರ ಸಹಾಯಕ್ಕೆ ಯಾರೂ ಧಾವಿಸಿರಲಿಲ್ಲ. ಇದೇ ಹೊತ್ತಿನಲ್ಲಿ ಉತ್ತರ ಪ್ರದೇಶದ ಸರ್ದಾರ್ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುನಿಲ್ ದತ್ ದ್ವಿವೇದಿ ತಮ್ಮ ಮನೆಗೆ ಇದೇ ರಸ್ತೆಯ ಮೂಲಕ ತೆರಳುತ್ತಿದ್ದಾಗ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುಗಳನ್ನು ಗಮನಿಸಿದ್ದಾರೆ.
ಕೂಡಲೇ ಕಾರನ್ನು ತಕ್ಷಣ ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಲೋಹಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಾರ್ಡ್ ಗೆ ಅವರು ಗಾಯಾಳು ಒಬ್ಬನನ್ನು ತನ್ನ ಬೆನ್ನಲ್ಲಿ ಹೊತ್ತುಕೊಂಡು ಸಾಗಿದ್ದಾರೆ. ಇತರರನ್ನು ಸ್ಟ್ರೆಚರ್ ಗಳ ಮೂಲಕ ಸಾಗಿಸಲಾಯಿತು. ಸ್ಥಳೀಯರು ಇದನ್ನು ವಿಡಿಯೋ ಮಾಡಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಕರ್ತವ್ಯ ಪಾಲನೆ ಮಾಡಿದ ಶಾಸರಕ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.