ದೇಶ

ಉರಿ ಸೆಕ್ಟರ್'ನಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿದಿದೆ ಎಂದು ಭಾನುವಾರ ತಿಳಿದುಬಂದಿದೆ...

ಉರಿ ಸೆಕ್ಟರ್'ನಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಸಂಗ್ರಹ ಚಿತ್ರ
Published On :
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್'ನಲ್ಲಿ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಓರ್ವ ಉಗ್ರರನ್ನು ಸದೆಬಡಿದಿದೆ ಎಂದು ಭಾನುವಾರ ತಿಳಿದುಬಂದಿದೆ. 
ಉರಿ ವಲಯದ ಕರ್ಗಿಯಾ ಪ್ರದೇಶದಲ್ಲಿ ಉಗ್ರರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದರು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿತ್ತು. 
ಸೇನಾಪಡೆ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಸೇನಾಪಡೆ ಉಗ್ರರ ವಿರುದ್ದ ಎನ್'ಕೌಂಟರ್ ನಡೆಸಲು ಮುಂದಾಗಿದ್ದು. ಇದರಂತೆ ಇದೀಗ ಓರ್ವ ಉಗ್ರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 
ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈಗಾಗಲೇ ಗಡಿ ಪ್ರದೇಶದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ಸ್ಥಳವನ್ನು ಸುತ್ತುವರೆದಿರುವ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.