ದೇಶ

ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ತೆಗೆದ ವಿಡಿಯೋ ಶಶಿಕಲಾ ಬಳಿ ಇದೆ: ದಿನಕರನ್

ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರು ಆಸ್ಪತ್ರೆಯಲ್ಲಿದಾಗ ತೆಗೆದ ವಿಡಿಯೋ ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು....

ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ತೆಗೆದ ವಿಡಿಯೋ ಶಶಿಕಲಾ ಬಳಿ ಇದೆ: ದಿನಕರನ್
ಟಿಟಿವಿ ದಿನಕರನ್
Published On :
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರು ಆಸ್ಪತ್ರೆಯಲ್ಲಿದಾಗ ತೆಗೆದ ವಿಡಿಯೋ ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ಉಚ್ಚಾಟಿತ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ಅವರ ಬಳಿ ಇದೆ ಎಂದು ಉಚ್ಚಾಟಿತ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಅವರು ಸೋಮವಾರ ಹೇಳಿದ್ದಾರೆ.
ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ನಂತರ ತೆಗೆದ ವಿಡಿಯೋ ಶಶಿಕಲಾ ಅವರ ಬಳಿ ಇದ್ದು, ಅದನ್ನು ತನಿಖಾ ಸಂಸ್ಥೆಗೆ ನೀಡುವುದಾಗಿ ದಿನಕರನ್ ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹಾಗೂ ದಿಂಡಿಗಲ್ ಶ್ರೀನಿವಾಸನ್  ಸೇರಿದಂತೆ ಕೆಲವು ನಾಯಕರು ಯೂ ಟರ್ನ್ ಹೊಡೆಯುತ್ತಿರುವುದರಿಂದ ಜನ ನಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಆದರೆ ಅಮ್ಮ ಸಾವಿನ ನಂತರ ಅವರು ಹೇಗೆ ತಮ್ಮ ನಿಷ್ಠೆ ಬದಲಿಸಿದ್ದಾರೆ ಎಂಬುದು ಆ ವಿಡಿಯೋ ನೋಡಿದರೆ ಗೊತ್ತಾಗುತ್ತೆ ಎಂದಿದ್ದಾರೆ.
ಇತ್ತೀಚಿಗಷ್ಟೇ ತಮಿಳುನಾಡು ಅರಣ್ಯ ಸಚಿವ ದಿಂಡಿಗಲ್ ಶ್ರೀನಿವಾಸನ್ ಅವರು, ತಾವು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದಾಗ ಅಮ್ಮನನ್ನು ನೋಡಲು ಶಶಿಕಾಲ ನಮಗೆ ಅವಕಾಶ ನೀಡಲಿಲ್ಲ. ಅವರು ಕೇವಲ ತಮ್ಮ ಕುಟುಂಬದವರಿಗೆ ಮಾತ್ರ ಅವಕಾಶ ನೀಡುತ್ತಿದ್ದರು ಎಂದು ಆರೋಪಿಸಿದ್ದರು. ಅಲ್ಲದೆ ಆ ವೇಳೆ ತಾವು ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.