500 ಕೋಟಿ ಅಕ್ರಮ ಆಸ್ತಿ ಹೊಂದಿದ್ದ ಆಂಧ್ರ ಪ್ರದೇಶ ಮುನ್ಸಿಪಲ್ ಅಧಿಕಾರಿ ಬಂಧನ!
ಆಂಧ್ರ ಪ್ರದೇಶದ ಮುನ್ಸಿಪಲ್ ಅಧಿಕಾರಿಯೊಬ್ಬರು ಬರೊಬ್ಬರಿ 500 ಕೋಟಿ ಅಕ್ರಮ ಆಸ್ತಿ ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದು, ಅವರ ನಿವೃತ್ತಿಗೆ ಕೇವಲ 3 ದಿನ ಬಾಕಿ ಇರುವಂತೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

Published On :
ವಿಶಾಖಪಟ್ಟಣ: ಆಂಧ್ರ ಪ್ರದೇಶದ ಮುನ್ಸಿಪಲ್ ಅಧಿಕಾರಿಯೊಬ್ಬರು ಬರೊಬ್ಬರಿ 500 ಕೋಟಿ ಅಕ್ರಮ ಆಸ್ತಿ ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿದ್ದು, ಅವರ ನಿವೃತ್ತಿಗೆ ಕೇವಲ 3 ದಿನ ಬಾಕಿ ಇರುವಂತೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ವಿಶಾಖ ಪಟ್ಟಣದ ನಗರಸಭೆಯ ನಗರ ಯೋಜನೆ ವಿಭಾಗ ನಿರ್ದೇಶಕ ಗೊಲ್ಲ ವೆಂಕಟ ರಘುರಾಮಿ ರೆಡ್ಡಿ ಎಂಬುವವರನ್ನು ನಿನ್ನೆ ರಾತ್ರಿ ಆಂಧ್ರ ಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಹಿಂದೂಸ್ತಾನ ಟೈಮ್ಸ್ ವರದಿ ಮಾಡಿವೆ. ವರದಿಯಲ್ಲಿರುವಂತೆ ಅಧಿಕಾರಿ ರಘುರಾಮಿ ರೆಡ್ಡಿ ಅವರು ಭಾರಿ ಪ್ರಮಾಣದಲ್ಲಿ ಆದಾಯ ಮೀರಿ ಆಸ್ತಿ ಹೊಂದಿದ್ದ ಆರೋಪದ ಮೇರೆಗೆ ಹೆಚ್ಚಿನ ವಿಚಾರಣೆಗೆ ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೇ ಅಧಿಕಾರಿ ರಘುರಾಮಿ ರೆಡ್ಡಿ ಅವರಿಗೆ ಸೇರಿದ ಕಚೇರಿ ಹಾಗೂ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.
ವಿಶಾಖಪಟ್ಟಣಂ, ವಿಜಯವಾಡ, ತಿರುಪತಿ ಮತ್ತು ಮಹಾರಾಷ್ಟ್ರದ ಶಿರಡಿ ಸೇರಿದಂತೆ ಒಟ್ಟು 15 ಪ್ರದೇಶಗಳಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಅಪಾರ ಪ್ರಮಾಣದ ಆಕ್ರಮ ಆಸ್ತಿ ಪತ್ತೆಯಾಗಿತ್ತು. ಅಧಿಕಾರಿ ರಘುರಾಮಿ ರೆಡ್ಡಿ ಶಿರಡಿಯಲ್ಲಿ ಸಾಯಿ ಸೂರಜ್ ಕುಂಜ್ ಹೆಸರಿನ ಬೃಹತ್ ಹೊಟೆಲ್ ಹೊಂದಿದ್ದು, ವಿಜಯವಾಡದ ಗನ್ನವರಂ ಬಳಿ ಸುಮಾರು 300 ಎಕರೆ ಭೂಮಿಯನ್ನು ಕೂಡ ಹೊಂದಿರುವ ವಿಚಾರ ದಾಖಲೆಗಳ ಪರಿಶೀಲನೆ ವೇಳೆ ತಿಳಿದುಬಂದಿತ್ತು. ಇದಲ್ಲದೆ ದಾಳಿ ವೇಳೆ ಮನೆಯಲ್ಲಿ 50 ಲಕ್ಷ ನಗದು ಹಣ ಕೂಡ ಪತ್ತೆಯಾಗಿತ್ತು. ಇದೇ ಕಾರಣಕ್ಕೆ ಅಧಿಕಾರಿ ರಘುರಾಮಿ ರೆಡ್ಡಿ ಅವರನ್ನು ಎಸಿಬಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ನಿವೃತ್ತಿಗೆ ಕೇವಲ 3 ದಿನ ಬಾಕಿ ಇತ್ತು
ವಿಪರ್ಯಾಸವೆಂದರೆ ನಿನ್ನೆ ಎಸಿಬಿ ಅಧಿಕಾರಿಗಳಿಂದ ಬಂಧನಕ್ಕೀಡಾದ ರಘುರಾಮಿ ರೆಡ್ಡಿ ಅವರು, ಇದೇ ಬುಧವಾರ ನಿವೃತ್ತರಾಗಲಿದ್ದರು. ಇದೇ ಕಾರಣಕ್ಕೆ ತಮ್ಮ ಸಿಬ್ಬಂದಿಗಳಿಗೆ, ಸ್ನೇಹಿತರಿಗೆ ಮತ್ತು ಸಂಬಂಧಿಗಳಿಗೆ ಅವರು ಗ್ರ್ಯಾಂಡ್ ಪಾರ್ಟಿ ನೀಡಲು ಕೂಡ ಸಿದ್ಧತೆ ನಡೆಸಿಕೊಂಡಿದ್ದರಂತೆ. ಬಳಿಕ ಒಂದಷ್ಟು ದಿನ ವಿದೇಶ ಪ್ರವಾಸಕ್ಕೆ ತೆರಳು ಸಿದ್ಧತೆ ನಡೆಸಿಕೊಂಡಿದ್ದ ಅವರು ವಿಮಾನ ಟಿಕೆಟ್ ಕೂಡ ಬುಕ್ ಮಾಡಿಸಿದ್ದರಂತೆ. ಆದರೆ ಅಷ್ಟು ಹೊತ್ತಿಗಾಗಲೇ ಎಸಿಬಿ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದಾರೆ.
ಎಸಿಬಿ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಇವರ ಅಧಿಕೃತ ಆದಾಯ ಮಾಸಿಕ ಸುಮಾರು 1 ಲಕ್ಷ ಇದೆ. ಇದರ ಹೊರತಾಗಿಯೂ ಇವರ ಬಳಿ ಸುಮಾರು 500 ಕೋಟಿ ಆಸ್ತಿ ಪತ್ತೆಯಾಗಿದೆ. ಇದಲ್ಲದೆ ಇನ್ನೂ ಹಲವು ಬ್ಯಾಂಕ್ ಲಾಕರ್ ಗಳು, ಬ್ಯಾಂಕ್ ಖಾತೆಗಳ ಪರಿಶೀಲನೆ ನಡೆಸಬೇಕಿದೆ. ಅಂತೆಯೇ ಕುಟುಂಬಸ್ಥರ ಹೆಸರಲ್ಲಿರುವ ಭೂಮಿಗಳ ಮೌಲ್ಯಮಾಪನ ಮಾಡಬೇಕಿದೆ. ಅಲ್ಲೂ ಮತ್ತಷ್ಟು ಆಸ್ತಿ ಪತ್ತೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಘುರಾಮಿ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಎಸಿಬಿ ನಿರ್ದೇಶಕ ಆರ್ ಪಿ ಠಾಕೂರ್ ಹೇಳಿದ್ದಾರೆ.
ದಾಳಿ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆ
ಇನ್ನು ರುಘುರಾಮಿ ರೆಡ್ಡಿ ಅವರ ವಿಶಾಖಪಟ್ಟಣ ನಿವಾಸದಲ್ಲಿ 50 ಲಕ್ಷ ನಗದು ಹಣವಲ್ಲದೇ, 10 ಕೆಜಿಗೂ ಅಧಿಕ ಚಿನ್ನ ಪತ್ತೆಯಾಗಿತ್ತು. ಈ ಪೈಕಿ 4 ಕೋಟಿ ಮೌಲ್ಯದ ಚಿನ್ನಾಭರಣ, 5 ಲಕ್ಷ ಮೌಲ್ಯ ಬೆಳ್ಳಿ ಆಭರಣಗಳು, 25 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಂತೆಯೇ ಕೃಷ್ಣಾ ಜಿಲ್ಲೆಯಲ್ಲಿ 11 ಎಕರೆ ಮಾವಿನ ತೋಟ, ಗುಂಟೂರಿನಲ್ಲಿ 5.15 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿರುವ ಬೃಹತ್ ಬಂಗಲೆಯ ದಾಖಲೆ ಪತ್ರಗಳು ಪತ್ತೆಯಾಗಿವೆ. ಅಂತೆಯೇ ರಘುರಾಮಿ ರೆಡ್ಡಿ ಸಂಬಂಧಿಕರ ಹೆಸರಲ್ಲಿ ನಾಲ್ಕು ಖಾಸಗಿ ಸಂಸ್ಥೆಗಳು ಕೂಡ ಇದ್ದು, ಸಾಯಿ ಸಾಧನಾ ಇನ್ ಫ್ರಾ ಪ್ರಾಜೆಕ್ಟ್ಸ್, ಸಾಯಿ ಶ್ರದ್ಧಾ ಅವೆನ್ಯೂ, ಮಾತಾ ಇಂಡಸ್ಟ್ರೀಸ್, ನಲ್ಲೂರಿವಾರಿ ಚಾರಿಟಬಲ್ ಟ್ರಸ್ಟ್ ಎಂಬ ಹೆಸರಿನ ಸಂಸ್ಥೆಗಳು ಇವೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Visakhapatnamವಿಶಾಖಪಟ್ಟಣAndhra Pradeshಆಂಧ್ರ ಪ್ರದೇಶAnti-Corruption Bureaumunicipal departmentಭ್ರಷ್ಟಾತಾರ ನಿಗ್ರಹ ದಳನಗರಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?