ಅಫ್ಘಾನಿಸ್ತಾನದಲ್ಲಿ ಭಾರತೀಯ ಪಡೆಗಳು ಇಲ್ಲ: ರಕ್ಷಣಾ ಸಚಿವೆ
ಅಫ್ಘಾನಿಸ್ತಾನದಲ್ಲಿ ಭಾರತ ತನ್ನ ಸೇನೆ ನಿಯೋಜಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಕ್ಷಣಾ ಸಚಿವೆ ನಿರ್ಮಲಾ....

Published On :
ನವದೆಹಲಿ: ಅಫ್ಘಾನಿಸ್ತಾನದಲ್ಲಿ ಭಾರತ ತನ್ನ ಸೇನೆ ನಿಯೋಜಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಯುದ್ಧದಿಂದ ಹಾನಿಗೊಳಗಾದ ಅಫ್ಘಾನಿಸ್ತಾನದ ಸ್ಥಿರತೆಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳನ್ನು ವಿಸ್ತರಿಸಲಾಗುವುದು ಎಂದು ಮಂಗಳವಾರ ತಿಳಿಸಿದ್ದಾರೆ.
ಅಮೆರಿಕ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಅಫ್ಘಾನಿಸ್ತಾನದಲ್ಲಿ ನಮ್ಮ ಯಾವುದೇ ಪಡೆಗಳು ಇಲ್ಲ ಎಂದು ಸ್ಪಷ್ಟಪಡಿಸಿದರು.
ಭಯೋತ್ಪಾದನೆಗೆ ಕಡಿವಾಣ ಹಾಕುವುದಕ್ಕೆ ಸಂಬಂಧಿಸಿದಂತೆ ಭಾರತ-ಅಮೆರಿಕ ನಡುವೆ ವಿಸ್ತೃತ ಚರ್ಚೆ ನಡೆಸಿದ್ದು, ಭಯೋತ್ಪಾದನೆ ಒಂದು ರಾಜ್ಯ ನೀತಿಯ ಅಸ್ತ್ರವಾಗಿ ಬಳಸುವುದನ್ನು ಖಂಡಿಸಲಾಗಿದೆ ಎಂದು ರಕ್ಷಣಾ ಸಚಿವೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


