ಕೇಂದ್ರ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಕೆ
ನುರಿತ ಅನುಭವಿ ವೈದ್ಯರ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರಿ ವೈದ್ಯರ ನಿವೃತ್ತಿ ...

Published On :
ನವದೆಹಲಿ: ನುರಿತ ಅನುಭವಿ ವೈದ್ಯರ ಕೊರತೆಯನ್ನು ನೀಗಿಸಲು ಕೇಂದ್ರ ಸರ್ಕಾರಿ ವೈದ್ಯರ ನಿವೃತ್ತಿ ವಯೋಮಿತಿಯನ್ನು 65 ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಿ ವೈದ್ಯರು, ಕೇಂದ್ರ ಆರೋಗ್ಯ ಸೇವಾ ವೈದ್ಯರುಗಳ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಸಚಿವ ಸಂಪುಟ ಸಭೆ ನಂತರ ರವಿಶಂಕರ್ ಪ್ರಸಾದ್ ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಅನುಭವಿ ವೈದ್ಯರುಗಳ ಕೊರತೆಯನ್ನು ನೀಗಿಸಲು ನಿವೃತ್ತಿ ವಯಸ್ಸನ್ನು 62ರಿಂದ 65 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತು ಪ್ರಸ್ತಾಪಕ್ಕೆ ಕಳೆದ ಮೇ ತಿಂಗಳಲ್ಲಿ ಆರೋಗ್ಯ ಸಚಿವಾಲಯ ಒಪ್ಪಿಗೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನಿವೃತ್ತಿretirementರವಿಶಂಕರ್ ಪ್ರಸಾದ್Ravishankar PrasadCentral government doctorsಕೇಂದ್ರ ಸರ್ಕಾರಿ ವೈದ್ಯರು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


