ದೇಶ

ಆದರ್ಶ ಹಗರಣ: ಅಶೋಕ್ ಚವಾಣ್ ಅರ್ಜಿ ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

ಆದರ್ಶ ಹೌಸಿಂಗ್‌ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ...

ಆದರ್ಶ ಹಗರಣ: ಅಶೋಕ್ ಚವಾಣ್ ಅರ್ಜಿ ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್
ಅಶೋಕ್ ಚವಾಣ್
Published On :
ಮುಂಬೈ: ಆದರ್ಶ ಹೌಸಿಂಗ್‌ ಸೊಸೈಟಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐಗೆ ಅನುಮತಿ ನೀಡಿದ್ದ ಮಹಾರಾಷ್ಟ್ರ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್‌ ಅವರ ನಿರ್ಧಾರ ಪ್ರಶ್ನಿಸಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್‌ ಚವಾಣ್‌ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ ಬಾಂಬೆ ಹೈಕೋರ್ಟ್ ಗುರುವಾರ ತೀರ್ಪು ಕಾಯ್ದಿರಿಸಿದೆ.
2016ರ ಫೆಬ್ರವರಿಯಲ್ಲಿ ವಿದ್ಯಾಸಾಗರ್ ರಾವ್ ಅವರು ಅಶೋಕ್ ಚವಾಣ್ ಅವರ ವಿರುದ್ಧ ಅಪರಾಧ ದಂಡಸಂಹಿತೆ 197ನೇ ಕಲಮಿನ ಪ್ರಕಾರ ಪ್ರಾಸುಕ್ಯೂಷನ್ ಗೆ ಅನುಮತಿ ನೀಡಿದ್ದರು. 
ರಾಜ್ಯಪಾಲರ ಆದೇಶ ಪ್ರಶ್ನಿಸಿ ಚವಾಣ್ ಅವರು ಬಾಂಬ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ವಿದ್ಯಾಸಾಗರ್ ರಾವ್ ಅವರು ದುರುದ್ದೇಶದಿಂದ ಅನುಮತಿ ನೀಡಿದ್ದು, ಇದು ಕಾನೂನು ಬಾಹಿರ ಮತ್ತು ನ್ಯಾಯಸಮ್ಮತವಾಗಿಲ್ಲ. ಹೀಗಾಗಿ ವಿದ್ಯಾಸಾಗರ್ ರಾವ್ ಅವರ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು.
ಆದರ್ಶ ಸೊಸೈಟಿ (ಅಪಾರ್ಟ್‌ಮೆಂಟ್‌), ಕಾರ್ಗಿಲ್‌ ಯುದ್ಧ ಸೇನಾನಿಗಳ ಕುಟುಂಬಕ್ಕೆ ಮೀಸಲಾಗಿದ್ದರೂ ಇದರಲ್ಲಿನ ಮನೆಗಳನ್ನು ಹೊರಗಿನವರಿಗೆ ಶಿಫಾರಸು ಮಾಡಿದ ಆರೋಪ ಚವಾಣ್‌ ಮೇಲಿದೆ. ಇದೇ ಆರೋಪದ ಕಾರಣ 2010ರಲ್ಲಿ ಚವಾಣ್‌ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.
ಚವಾಣ್‌ ಸಿಎಂ ಆಗಿದ್ದ ಅವಧಿಯಲ್ಲಿ ನಡೆದ ಪ್ರಕರಣ ಇದಾಗಿದ್ದರಿಂದ ಅವರ ವಿಚಾರಣೆಗೆ ರಾಜ್ಯಪಾಲರ ಅನುಮತಿ ಅಗತ್ಯವಾಗಿರುತ್ತದೆ. ಆದರೆ ಈ ಹಿಂದಿನ ರಾಜ್ಯಪಾಲ ಕೆ. ಶಂಕರನಾರಾಯಣನ್‌ ಅವರು ಚವಾಣ್‌ ವಿಚಾರಣೆಗೆ ಅನುಮತಿ ನಿರಾಕರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.