ಎರಡೆಲೆ ಚಿಹ್ನೆ ವಿವಾದ: ಟಿಟಿವಿ ದಿನಕರನ್ ಅರ್ಜಿ ತಿರಸ್ಕರಿಸಿದ ಚುನಾವಣಾ ಆಯೋಗ
ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದದ ಕುರಿತು ದಾಖಲೆ ಸಲ್ಲಿಸಲು 15 ದಿನಗಳ ಕಾಲವಕಾಶ ಕೋರಿ.....

Published On :
ನವದೆಹಲಿ: ಎಐಎಡಿಎಂಕೆ ಪಕ್ಷದ ಅಧಿಕೃತ "ಎರಡೆಲೆ ಚಿಹ್ನೆ' ವಿವಾದದ ಕುರಿತು ದಾಖಲೆ ಸಲ್ಲಿಸಲು 15 ದಿನಗಳ ಕಾಲವಕಾಶ ಕೋರಿ ಎಐಎಡಿಎಂಕೆ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಸಲ್ಲಿಸಿದ್ದ ಅರ್ಜಿಯನ್ನು ಚುನಾವಣಾ ಆಯೋಗ ಗುರುವಾರ ತಿರಸ್ಕರಿಸಿದೆ. ಅಲ್ಲದೆ ಅಕ್ಟೋಬರ್ 6ರಂದು ಪ್ರಕರಣದ ವಿಚಾರಣೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.
ಮದ್ರಾಸ್ ಹೈಕೋರ್ಟ್ ನ ಮದುರೈ ಪೀಠ ಅಕ್ಟೋಬರ್ 31ರೊಳಗೆ ಎರಡೆಲೆ ವಿವಾದವನ್ನು ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿರುವುದರಿಂದ ದಾಖಲೆ ಸಲ್ಲಿಸಲು ದಿನಕರನ್ ಅವರಿಗೆ ನೀಡಿದ್ದ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಎಐಎಡಿಎಂಕೆಯ ಎರಡು ಬಣಗಳು ಎರಡೆಲೆ ಚಿಹ್ನೆ ತಮಗೇ ಸೇರಿದ್ದೆಂದು ವಿವಾದವನ್ನು ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಈ ಚಿಹ್ನೆಯನ್ನು ಚುನಾವಣಾ ಆಯೋಗ ಸ್ಥಗಿತಗೊಳಿಸಿತ್ತು.
ಸೆ.29ರೊಳಗೆ ತಮ್ಮ ತಾಜಾ ಉತ್ತರಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ದಿನಕರನ್ ಹಾಗೂ ಮುಖ್ಯಮಂತ್ರಿ ಇ ಪಳನಿಸ್ವಾಮಿ ಬಣಕ್ಕೆ ಬಣಗಳಿಗೆ ಸೂಚಿಸಿತ್ತು. 2016ರ ಡಿಸೆಂಬರ್ 5ರ ಪ್ರಕಾರ ಪಕ್ಷದ ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ಸಾಮಾನ್ಯ ಮಂಡಳಿ ಸದಸ್ಯರ ಪಟ್ಟಿಯನ್ನು ಸಲ್ಲಿಸುವಂತೆ ಆಯೋಗವು ಸಂಬಂಧಿಸಿದ ಎಲ್ಲರಿಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


