ಭಾರತಕ್ಕೆ ಧನ್ಯವಾದ ತಿಳಿಸಿ, ಪಾಕಿಸ್ತಾನಕ್ಕೆ ವಾಚಾಮಗೋಚರ ಬೈದ ಅಫ್ಘಾನ್ ನಾಯಕ
ಯುದ್ಧಪೀಡಿತ ರಾಷ್ಟ್ರವಾಗಿರುವ ಅಫ್ಘಾನಿಸ್ತಾನದ ಸುಧಾರಣೆಗೆ ಸಹಕಾರ ನೀಡುತ್ತಿರುವ ಭಾರತಕ್ಕೆ ಅಫ್ಘಾನಿಸ್ತಾನ ಧನ್ಯವಾದ ತಿಳಿಸಿದ್ದು, ಸುಧಾರಣೆಗೆ ಅವಕಾಶ ನೀಡದೇ ಅಸ್ಥಿರತೆ ಉಂಟುಮಾಡಲು...

Published On :
ನವದೆಹಲಿ: ಯುದ್ಧಪೀಡಿತ ರಾಷ್ಟ್ರವಾಗಿರುವ ಅಫ್ಘಾನಿಸ್ತಾನದ ಸುಧಾರಣೆಗೆ ಸಹಕಾರ ನೀಡುತ್ತಿರುವ ಭಾರತಕ್ಕೆ ಅಫ್ಘಾನಿಸ್ತಾನ ಧನ್ಯವಾದ ತಿಳಿಸಿದ್ದು, ಸುಧಾರಣೆಗೆ ಅವಕಾಶ ನೀಡದೇ ಅಸ್ಥಿರತೆ ಉಂಟುಮಾಡಲು ಯತ್ನಿಸುತ್ತಿರುವ ಪಾಕಿಸ್ತಾನದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಅಫ್ಘಾನಿಸ್ತಾನದ ಮುಖ್ಯ ಕಾರ್ಯದರ್ಶಿ ಅಬ್ದುಲ್ಲಾ ಭಾರತಕ್ಕೆ ಧನ್ಯವಾದ ತಿಳಿಸಿದ್ದು, ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಭೇಟಿ ನೀಡಿರುವ ಅಬ್ದುಲ್ಲಾ, ಸಪ್ರು ಹೌಸ್ ನಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದು, ಪಾಕಿಸ್ತಾನವೂ ಸೇರಿದಂತೆ ನೆರೆರಾಷ್ಟ್ರಗಳೊಂದಿಗೆ ಸ್ನೆಹ ಹಸ್ತ ಚಾಚಲು ಅಫ್ಘಾನಿಸ್ತಾನ ಸಿದ್ಧವಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಸಂಬಂಧದಲ್ಲಿ ನಮಗೆ ಹಲವಾರು ಸವಾಲುಗಳಿವೆ. ನಮ್ಮ ಸಂದೇಶ ಸ್ಪಷ್ಟವಾಗಿದೆ. ನೆರೆ ರಾಷ್ಟ್ರಗಳಿಗೆ ಅಫ್ಘಾನಿಸ್ತಾನ ಕೇಡು ಬಯಸುವುದಿಲ್ಲ. ತನ್ನ ಪ್ರದೇಶದ ಜನತೆಯ ಹಿತಾಸಕ್ತಿ ಮುಖ್ಯವಾಗಿದೆ ಎಂಬುದು ಅಫ್ಘಾನಿಸ್ತಾನದ ಸಂದೇಶ ಎಂದು ಅಬ್ದುಲ್ಲಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನAfghanistanಅಫ್ಘಾನಿಸ್ತಾನChief Executive Abdullah Abdullahಮುಖ್ಯ ಕಾರ್ಯದರ್ಶಿ ಅಬ್ದುಲ್ಲಾ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


