ಮತದಾರರ ಪಟ್ಟಿ ಪರಿಷ್ಕರಣೆ: ಮಾಜಿ ಪ್ರಧಾನಿ ವಾಜಪೇಯಿ ಹೆಸರು ಹೊರಕ್ಕೆ
ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಲಖ್ನೋ ಮುನಿಸಿಪಲ್ ಕಾರ್ಪೋರೇಷನ್ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.

Published On :
ಲಖ್ನೋ: ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಮುಖಂಡ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಲಖ್ನೋ ಮುನಿಸಿಪಲ್ ಕಾರ್ಪೋರೇಷನ್ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ.
"ಕಾನೂನು ಪ್ರಕಾರ ಯಾರೇ ಆದರೂ ನೊಂದಾಯಿತ ವಿಳಾಸದಲ್ಲಿ ಆರು ತಿಂಗಳಿಗೂ ಹೆಚ್ಚು ಕಾಲ ನೆಲೆಸದೆ ಹೋದಲ್ಲಿ ಅಂತಹಾ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯಲು ಅವಕಾಶವಿದೆ" ಎಂದು ಲಖ್ನೋ ವಲಯ ಚುನಾವಣಾಧಿಕಾರಿ ಎಎನ್ ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
"ವಾಜಪೇಯಿ ಹಲವು ವರ್ಷಗಳಿಂದ ಲಕ್ನೋದಲ್ಲಿ ವಾಸವಾಗಿಲ್ಲವಾದ್ದರಿಂದ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ" ಎಂದು ಅವರು ಹೇಳಿದ್ದಾರೆ.
ಮಾಜಿ ಪ್ರಧಾನಿ ವಾಜಪೇಯಿ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದಾರೆ. ಅವರು ನವದೆಹಲಿಯಲ್ಲಿ ವಾಸವಾಗಿದ್ದಾರೆ. ಸದ್ಯ ಲಖ್ನೋ ದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಹೊಸ ಮತದಾರರ ಪಟ್ಟಿ ಬಿಡುಗಡೆಗೊಂಡಿದೆ. ಹೊಸ ಪಟ್ಟಿಯಿಂದ ವಾಜಪೇಯಿ ಹೆಸರನ್ನು ತೆಗೆದುಹಾಕಲಾಗಿದೆ.
2004ರ ಲೋಕಸಭಾ ಚುನಾವಣೆ ನಂತರ ವಾಜಪೇಯಿ ಇಲ್ಲಿ ಮತ ಚಲಾವಣೆ ಮಾಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Atal Bihari Vajpayeeಅಟಲ್ ಬಿಹಾರಿ ವಾಜಪೇಯಿLucknowಮತದಾರರ ಪಟ್ಟಿLucknow Municipal Corportationvoter listFormer prime minister Vajpayeeಲಖ್ನೋ ಮುನಿಸಿಪಲ್ ಕಾರ್ಪೊರೇಷನ್ಮಾಜಿ ಪ್ರಧ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


