ದೇಶ

ರೋಹಿಂಗ್ಯಾ ಮುಸ್ಲಿಮರ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ರಾಷ್ಟ್ರೀಯ ಭದ್ರತೆ ಗಮನದಲ್ಲಿಡಿ: ಭಾಗವತ್

ದೇಶದಲ್ಲಿ ಆಶ್ರಯ ಕೋರಿರುವ ರೋಹಿಂಗ್ಯಾ ಮುಸ್ಲಿಮರ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ರಾಷ್ಟ್ರೀಯ ಭದ್ರತೆಯನ್ನು ಮನಸ್ಸಿನಲ್ಲಿರಿಸಿಕೊಳ್ಳಿ ಎಂದು ನರೇಂದ್ರ ಮೋದಿ ...

ರೋಹಿಂಗ್ಯಾ ಮುಸ್ಲಿಮರ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ರಾಷ್ಟ್ರೀಯ ಭದ್ರತೆ ಗಮನದಲ್ಲಿಡಿ: ಭಾಗವತ್
ಮೋಹನ್ ಭಾಗವತ್
Published On :
ನಾಗಪುರ: ದೇಶದಲ್ಲಿ ಆಶ್ರಯ ಕೋರಿರುವ ರೋಹಿಂಗ್ಯಾ ಮುಸ್ಲಿಮರ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ರಾಷ್ಟ್ರೀಯ ಭದ್ರತೆಯನ್ನು ಮನಸ್ಸಿನಲ್ಲಿರಿಸಿಕೊಳ್ಳಿ ಎಂದು ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರಕ್ಕೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸಲಹೆ ನೀಡಿದ್ದಾರೆ.
ನಾಗಪುರದಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಂಗ್ಲಾ ಅಕ್ರಮ ವಲಸಿಗರ ಸಮಸ್ಯೆ ಎದುರಿಸುತ್ತಿರುವ ನಮಗೆ, ರೋಹಿಂಗ್ಯಾ ಮುಸ್ಲಿಮರ ಒಳನುಸುಳುವಿಕೆ, ಮತ್ತೊಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.
ರೋಹಿಂಗ್ಯಾಗಳಿಗೆ ಆಶ್ರಯ ನೀಡುವುದರಿಂದ ಕೇವಲ ನಮ್ಮ ಕೆಲಸದ ಮೇಲೆ ಒತ್ತಡ ತರುವುದು ಮಾತ್ರವಲ್ಲ, ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ರೋಹಿಂಗ್ಯಾಗಳ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ರಾಷ್ಟ್ರೀಯ ಭದ್ರತೆ ಬಗ್ಗೆ ಎಚ್ಚರ ವಹಿಸಿ ಎಂದು ಹೇಳಿದ್ದಾರೆ. 
1990 ರಲ್ಲಿ ಕಾಶ್ಮೀರ ಕಣಿವೆಯಿಂದ ಸ್ಥಳಾಂತರಗೊಂಡ ಜನರ ಬಗ್ಗೆ ಗಮನಹರಿಸಬೇಕಿದೆ ಎಂದು ಹೇಳಿದ ಅವರು, ಹಳೇಯ ನಿಬಂಧನೆಗಳ್ನು ಪರಿಶೀಲಿಸಿ ಸಂವಿಧಾನಾತ್ಮಕ ತಿದ್ದುಪಡಿ ತರುವ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.