ಮುಂಬೈ ಪಾದಚಾರಿ ಮೇಲ್ಸೇತುವೆ ದುರಂತ: ಪುನರ್'ನಿರ್ಮಾಣಕ್ಕೆ 2015ರಲ್ಲಿಯೇ ಹಣ ಬಿಡುಗಡೆ ಮಾಡಿದ್ದ ಸುರೇಶ್ ಪ್ರಭು
22 ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಮುಂಬೈ ಪಾದಚಾರಿ ಮೇಲ್ಸೇತುವೆ ಪುನರ್ ನಿರ್ಮಾಣಕ್ಕಾಗಿ ಮಾಜಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು...

Published On :
ನವದೆಹಲಿ: 22 ಜನರ ಮಾರಣಹೋಮಕ್ಕೆ ಕಾರಣವಾಗಿದ್ದ ಮುಂಬೈ ಪಾದಚಾರಿ ಮೇಲ್ಸೇತುವೆ ಪುನರ್ ನಿರ್ಮಾಣಕ್ಕಾಗಿ ಮಾಜಿ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ವರದಿಗಳು ತಿಳಿಸಿವೆ.
ನಿನ್ನೆಯಷ್ಟೇ ಮುಂಬೈನ ಎಲ್'ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಬಳಿ ಇರುವ ಪಾದಚಾರಿಗಳ ಮೇಲ್ಸೇತುವೆಯಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ಮೇಲ್ಸೇತುವೆ ಕುಸಿದು ಬೀಳಲಿದೆ ಎಂಬ ವದಂತಿಗಳಿಗೆ ಕಿವಿಗೊಟ್ಟಿದ್ದ ಸ್ಥಳೀಯರು ಆತಂಕಗೊಂಡಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 22 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿದ್ದರು.
ಮೇಲ್ಸೇತುವೆ ದುರ್ಬಲವಾಗಿದೆ ಎಂದು 2015 ರಲ್ಲೇ ಕೇಂದ್ರ ರೈಲ್ವೆ ಹೇಳಿತ್ತು. ಸ್ಥಳೀಯರೂ ಸಹ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ದುರಂತ ಒಂದಲ್ಲಾ ಒಂದು ದಿನ ಸಂಭವಿಸುವುದು ನಿಶ್ಚಿತ ಎಂಬ ಆತಂಕದಲ್ಲಿಯೇ ಇದ್ದರು. ಇದಲ್ಲದೆ ಹಲವರು ಮೇಲ್ಸೇತುವೆ ಕುರಿತಂತೆ ಹಲವು ಬಾರಿ ಅಧಿಕಾರಿಗಳಿಗೆ ದೂರುಗಳನ್ನೂ ನೀಡಿದ್ದಾರೆ.
ಕೆಲ ಮೂಲಗಳು ಮಾಹಿತಿ ನೀಡಿರುವ ಪ್ರಕಾರ, ಮೇಲ್ಸೇತುವೆ ಕುರಿತಂತೆ ಬಂದಿದ್ದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಅಂದಿನ ರೈಲ್ವೇ ಸಚಿವ ಸುರೇಶ್ ಪ್ರಭು ಅವರು 2015ರಲ್ಲಿಯೇ ಮೇಲ್ಸೇತುವೆ ಪುನರ್ ನಿರ್ಮಾಣ ಮಾಡುವುದಕ್ಕಾಗಿ, ಸೇತುವೆ ಅಗಲೀಕರಣ ಮಾಡುವುದಕ್ಕಾಗಿ ರೂ.11.86 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು ಎಂದು ತಿಳಿದುಬಂದಿದೆ.
ಫೆ.20. 2016 ಮುಂಬೈನ ಶಿವಸೇನಾ ಸಂಸದ ಅರವಿಂದ್ ಸಾವಂತ್ ಅವರಿಗೆ ಸುರೇಶ್ ಪ್ರಭು ಅವರು ಪತ್ರವೊಂದರನ್ನು ಬರೆದಿದ್ದರು. ಎಲ್'ಫಿನ್'ಸ್ಟೋನ್ ರೈಲ್ವೆ ನಿಲ್ದಾಣದ ಬಳಿ 12 ಮೀಟರ್ ನೂತನ ಪಾದಚಾರಿ ಮೇಲ್ಸೇತುವೆ ನಿರ್ಮಾಣ ಕುರಿತ ಮನವಿಯನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ ಎಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ. ಇದಲ್ಲದೆ, ಉತ್ತರ ವಿಭಾಗದಲ್ಲಿ 100 ಮೀಟರ್ ನಷ್ಟು ಸೇತುವೆ ವಿಸ್ತರಣೆಯನ್ನು ಪರಿಗಣಿಸಿರುವುದಾಗಿ ಇಲಾಖೆ ತಿಳಿಸಿರುವುದು ಪತ್ರದಲ್ಲಿ ಕಂಡು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Suresh Prabhuಸುರೇಶ್ ಪ್ರಭುfundಹಣ ಬಿಡುಗಡೆMumbai stampedeಮುಂಬೈ ಕಾಲ್ತುಳಿತBridge Constructionಮೇಲ್ಸೇತುವ ನಿರ್ಮಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


