ನಟ ಟಾಮ್ ಅಲ್ಟರ್ ನಿಧನ: ಪ್ರಧಾನಿ ಮೋದಿ, ರಾಷ್ಟ್ರಪತಿ ಸಂತಾಪ
ಪದ್ಮ ಶ್ರೀ ಪುರಸ್ಕೃತ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಟಾಮ್ ಆಲ್ಟರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ...

Published On :
ನವದೆಹಲಿ: ಪದ್ಮ ಶ್ರೀ ಪುರಸ್ಕೃತ ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಟಾಮ್ ಆಲ್ಟರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ನಟ ಟಾಮ್ ಆಲ್ಟರ್ ಅವರ ನಿಧನದಿಂದ ದುಃಖದಲ್ಲಿ ಮುಳುಗಿರುವ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಬರಲಿ ಎಂದು ಪ್ರಧಾನಿ ಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.
ಅಮೆರಿಕ ಮೂಲದ ಭಾರತೀಯ ನಟ ಟಾಮ್ ಅವರು ಕಲಾಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರ ಅವರಿಗೆ 2008ರಲ್ಲಿ ಉನ್ನತ ನಾಗರಿಕ ಗೌರವವಾದ ಪದ್ಮಶ್ಮೀಯನ್ನು ನೀಡಿ ಸನ್ಮಾನಿಸಿತ್ತು.
ಸುಮಾರು 300ಕ್ಕೂ ಹೆಚ್ಚು ಚಿತ್ರಗಳು, ಅಸಂಖ್ಯಾತ ಟಿವಿ ಶೋಗಳಲ್ಲಿ ನಟಿಸಿದ್ದ ಅವರು 1990ರ ದಶಕದಲ್ಲಿ ಮನೆ ಮಾತಾಗಿದ್ದರು.
ಟಾಮ್ ಆಲ್ಟರ್ ಇತ್ತೀಚಿಗೆ ಚರ್ಮದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಟಾಮ್ ಆಲ್ಟರ್ ನಿಧನಕ್ಕೆ ವಿಷಾದಿಸುತ್ತೇನೆ. ಇವರನ್ನು ಕುಟುಂಬ ಪರ ಕಾಳಜಿಯ ಮತ್ತು ಚಲನಚಿತ್ರ ಪ್ರೇಮಿಗಳು ಸದಾ ನೆನಪಿಸಿಕೊಳ್ಳುತ್ತಾರೆ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


