ದೇಶ

ಕೆಂಪು ಕೋಟೆಯ ದಸರಾ ಆಚರಣೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ

ಸೆ.30 ರಂದು ವಿಜಯದಶಮಿಯ ಅಂಗವಾಗಿ ಕೆಂಪು ಕೋಟೆಯಲ್ಲಿ ದಸರಾ ಆಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕೆಂಪು ಕೋಟೆಯ ದಸರಾ ಆಚರಣೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Published On :
ನವದೆಹಲಿ: ಸೆ.30 ರಂದು ವಿಜಯದಶಮಿಯ ಅಂಗವಾಗಿ ಕೆಂಪು ಕೋಟೆಯಲ್ಲಿ ದಸರಾ ಆಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 
ವಿಜಯದಶಮಿಯ ಅಂಗವಾಗಿ ಟ್ವೀಟ್ ಮಾಡಿ ದೇಶದ ಜನತೆಗೆ ಶುಭಾಶಯ ಕೋರಿರುವ ಪ್ರಧಾನಿ ಮೋದಿ, ಕೆಟ್ಟದ್ದರ ವಿರುದ್ಧ ಒಳ್ಳೆಯದು ಗೆದ್ದ ಸಂಕೇತವಾಗಿ ಆಚರಿಸುವ ವಿಜಯದಶಮಿ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. 
2014 ರ ನಂತರ ಎರಡನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿಯಲ್ಲಿ ನಡೆಯುತ್ತಿರುವ ದಸರಾ ಆಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ. 2015 ರ ದಸರಾ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಗೆ ಶಿಲಾನ್ಯಾಸ ನೆರವೇರಿಸಲು ತೆರಳಿದ್ದರು. 2016 ರಲ್ಲಿ ಲಖನೌ ನಲ್ಲಿ ದಸರಾ ಆಚರಣೆ ಮಾಡಿದ್ದರು. 
ವರದಿಗಳ ಪ್ರಕಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಹ ದಸರಾ ಆಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.