ಜಯಲಲಿತಾ ಸಾವಿನ ಬಗ್ಗೆ ಇಪಿಎಸ್, ಒಪಿಎಸ್ ಮೌನವೇಕೆ: ಕಾಂಗ್ರೆಸ್ ಪ್ರಶ್ನೆ?
ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತಾದ ರಹಸ್ಯದ ಬಗ್ಗೆ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಡಿಸಿಎಂ ಪನೀರ್ ಸೆಲ್ವಂ ಈಗ ಏಕೆ ಮೌನವಾಗಿದ್ದಾರೆ ...

Published On :
ಚೆನ್ನೈ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಕುರಿತಾದ ರಹಸ್ಯದ ಬಗ್ಗೆ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮತ್ತು ಡಿಸಿಎಂ ಪನೀರ್ ಸೆಲ್ವಂ ಈಗ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಸಂಬಂಧ ಸುದ್ದಿಸಂಸ್ಥಯೊಂದಿಗೆ ಮಾತನಾಡಿರುವ ತಮಿಳುನಾಡು ಕಾಂಗ್ರೆಸ್ ಮುಖ್ಯಸ್ಥ ತಿರುವನವಕ್ಕೂರ್ ಜಯಲಲಿತಾ ಸಾವಿನ ಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸುತ್ತಿದ್ದ ಪನ್ನೀರ್ ಸೆಲ್ವಂ ಈಗ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಈಗಿನ ಮುಖ್ಯಮಂತ್ರಿ ಅಂದು ಜಯಲಲಿತಾರನ್ನು ಭೇಟಿಯಾಗಿದ್ದರೇ ಎಂದು ನಮಗೆ ಸ್ಪಷ್ಟತೆಯಿಲ್ಲ. ಅಂದು ಇದೇ ಪಳನಿಸ್ವಾಮಿ ಜಯಲಲಿತಾ ಸಂಪುಟದ ಪ್ರಮುಖ ಸಚಿವರಾಗಿದ್ದರು. ಹೀಗಾಗಿ ಸಿಎಂ ಮತ್ತು ಡಿಸಿಎಂ ಜಯಲಲಿತಾ ಆಸ್ಪತ್ರೆಯಲ್ಲಿದ್ದಾಗ ನಡೆದಿದ್ದೇನೆಂದು ಯಾಕೆ ಬಾಯಿ ಬಿಡುತ್ತಿಲ್ಲ ಎಂದು ಕೇಳಿದ್ದಾರೆ.
ಕಳೆದ ವರ್ಷಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಜಯಲಲಿತಾ ಸಾವನ್ನಪ್ಪಿದ್ದರು. ಜಯಲಲಿತಾ ಸಾವಿನ ತನಿಖೆ ನಡೆಸಲು ತಮಿಳುನಾಡು ಸರ್ಕಾರ ಮುರಿತ ವೈದ್ಯರ ತನಿಖಾ ಆಯೋಗ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


