ದೇಶ

ತೆಲಂಗಾಣ: ದಸರಾ ಆಚರಣೆ ವೇಳೆ ಕಟ್ಟಡ ಕುಸಿತ; 2 ಸಾವು, 20 ಮಂದಿಗೆ ಗಾಯ

ತೆಲಂಗಾಣ ರಾಜ್ಯದ ನಿಜಮಾಬಾದ್'ನಲ್ಲಿ ದಸರಾ ಆಚರಣೆ ವೇಳೆ ಕಟ್ಟಡವೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ 20 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ...

ತೆಲಂಗಾಣ: ದಸರಾ ಆಚರಣೆ ವೇಳೆ ಕಟ್ಟಡ ಕುಸಿತ; 2 ಸಾವು, 20 ಮಂದಿಗೆ ಗಾಯ
ತೆಲಂಗಾಣ: ದಸರಾ ಆಚರಣೆ ವೇಳೆ ಕಟ್ಟಡ ಕುಸಿತ
Published On :
ನಿಜಾಮಾಬಾದ್: ತೆಲಂಗಾಣ ರಾಜ್ಯದ ನಿಜಮಾಬಾದ್'ನಲ್ಲಿ ದಸರಾ ಆಚರಣೆ ವೇಳೆ ಕಟ್ಟಡವೊಂದು ಕುಸಿದು ಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ 20 ಮಂದಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ. 
ದಸರಾ ಆಚರಣೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಕಾರ್ಯಕ್ರಮ ನೋಡರು ಅಕ್ಕಪಕ್ಕದ ಕಟ್ಟದ ಮೇಲೆ ಜನರು ನಿಂತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ನಿನ್ನೆಯಷ್ಟೇ ಮುಂಬೈನ ಎಲ್ಫಿನ್'ಸ್ಟೋನ್ ರೈಲು ನಿಲ್ದಾಣದ ಪಾದಚಾರಿ ಸೇತುವೆಯಲ್ಲಿ ಕಾಲ್ತುಳಿತ ಸಂಭವಿಸಿ 22 ಮಂದಿ ಸಾವನ್ನಪ್ಪಿ, 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ನಿಜಾಮಾಬಾದ್ ನಲ್ಲೂ ಕಟ್ಟಡ ಕುಸಿದು ಬಿದ್ದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.