ಅಸನ್‌ಸೋಲ್ ಹಿಂಸಾಚಾರ: ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದ ಓವೈಸಿ
ಅಸನ್ ಸೋಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿರುದ್ಧ ...

Published On :
ಹೈದರಾಬಾದ್: ಅಸನ್ ಸೋಲ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿರುದ್ಧ ಆಲ್ ಇಂಡಿಯಾ ಮ್ಯಾಜೀಸ್ ಈ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹರಿ ಹಾಯ್ದಿದ್ದಾರೆ.
ಭಾನುವಾರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಓವೈಸಿ, ಪಶ್ಚಿಮಂ ಬಂಗಾಳ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ , ಹಿಂಸಾಚಾರ ನಡೆದ ಪ್ರದೇಶದಲ್ಲಿ ಹಿಂದೂಗಳ ಪ್ರಾಬಲ್ಯವಿರುವ ಸ್ಥಳಗಳಿಗೆ ಮಾತ್ರ ಭೇಟಿ ನೀಡಿದ್ದಾರೆ. ಆದರೆ ಗಲಭೆಯಲ್ಲಿ ಮಗನನ್ನು ಕಳೆದುಕೊಂಡ ಇಮಾಮ್ ಮನೆಗೆ ಭೇಟಿ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಕಡೇ ಪಕ್ಷ ನೀವು ಇಮಾಮ್ ಮನೆಗೆ ಭೇಟಿ ನೀಡಿ ಅವರಿಗೆ ಸಾಂತ್ವಾನ ಹೇಳಬೇಕಿತ್ತು, ಗಲಭೆ ಪೀಡಿತ ಪ್ರತಿಯೊಂದು ಸ್ಥಳಗಳಿಗೂ ಭೇಟಿ ನೀಡಬೇಕಿತ್ತು,ಇದು ನಿಮ್ಮ ಸಾಂವಿಧಾನಿಕ ಅಧಿಕಾರ ಹಾಗೂ ಜವಾಬ್ದಾರಿಯಾಗಿತ್ತು ಎಂದು ಹೇಳಿದ್ದಾರೆ,
ಇನ್ನೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಾತ್ಯಾತೀತ ಸರ್ಕಾರದಲ್ಲಿ ಮುಸ್ಲಿಮರ ಮೇಲೆ ದಾಳಿ ನಡೆಯುತ್ತಿದೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Mamata Banerjeeಮಮತಾ ಬ್ಯಾನರ್ಜಿAsaduddin Owaisiಅಸಾದುದ್ದೀನ್ ಓವೈಸಿKeshari Nath Tripathiಕೇಸರಿ ನಾಥ್ ತ್ರಿಪಾಠಿAsansol violenceಅನಾಸೋಲ್ ಹಿಂಸಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


