ಎಸ್'ಸಿ/ಎಸ್'ಟಿ ಕಾಯ್ದೆ ವಿವಾದ; ಭಾರತ್ ಬಂದ್ ಕರೆಗೆ ಪಂಜಾಬ್'ನಲ್ಲಿ ವ್ಯಾಪಕ ಬೆಂಬಲ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಏ.2 ರಂದು ವಿವಿಧ ದಲಿತ ಸಮುದಾಯಗಳು ಭಾರತ್ ಬಂದ್'ಗೆ ಕರೆ ನೀಡಿದ್ದು, ಅತೀ ಹೆಚ್ಚು ಎಸ್'ಸಿಗಳ ಜನಸಂಖೆಯನ್ನು ಹೊಂದಿರುವ...

Published On :
ಚಂಡೀಗಢ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸುವ ಸುಪ್ರೀಂಕೋರ್ಟ್ ಆದೇಶವನ್ನು ಖಂಡಿಸಿ ಏ.2 ರಂದು ವಿವಿಧ ದಲಿತ ಸಮುದಾಯಗಳು ಭಾರತ್ ಬಂದ್'ಗೆ ಕರೆ ನೀಡಿದ್ದು, ಅತೀ ಹೆಚ್ಚು ಎಸ್'ಸಿಗಳ ಜನಸಂಖೆಯನ್ನು ಹೊಂದಿರುವ ಪಂಜಾಬ್ ರಾಜ್ಯದಲ್ಲಿ ಪ್ರತಿಭಟನೆಗೆ ವ್ಯಾಪಕ ಬೆಂಬಲಗಳು ವ್ಯಕ್ತವಾಗತೊಡಗಿದೆ.
ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರ ಸರ್ಕಾರ, ಸಾರ್ವಜನಿಕ ಸಾರಿಗೆ ಸೇರಿದಂತೆ ಇನ್ನಿತರೆ ಎಲ್ಲಾ ಸೇವೆಗಳನ್ನು ಬಂದ್ ಮಾಡುವಂತೆ ಆದೇಶಿಸಿದ್ದಾರೆ.
ಇದಲ್ಲದೆ, ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳು, ಬ್ಯಾಂಕ್'ಗಳೂ ಕೂಡ ಬಂದ್ ಆಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಭಾರತ್ ಬಂದ್ ಕರೆ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಬಂದ್ ಹಿನ್ನಲೆಯಲ್ಲಿ ರಾಜ್ಯದ ಸಾರ್ವಜನಿಕ ಬಸ್ ಗಳು ರಸ್ತೆಯಲ್ಲಿ ಸಂಚಾರ ನಡೆಸುವುದಿಲ್ಲ. ಕರೆಗಳನ್ನು ಹೊರತುಪಡಿಸಿ, 2ಜಿ, 3ಜಿ, 4ಜಿ ಹಾಗೂ ಸಿಡಿಎಂಎ, ಎಸ್ಎಂಎಸ್ ಸೇವೆಗಳು, ಡೋಂಗಲ್ ಸೇರಿ ಎಲ್ಲಾ ರೀತಿಯ ಸೇವೆಗಳನ್ನು ಏ.1ರ ಸಂಜೆ 5 ರಿಂದ ಏಪ್ರಿಲ್ 2 ರಾತ್ರಿ 11ರವರೆಗೂ ಬಂದ್ ಮಾಡಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಪಂಜಾಬ್ ರಾಜ್ಯ ಶಿಕ್ಷಣ ಇಲಾಖೆ ಕೂಡ ಪರೀಕ್ಷೆಗಳನ್ನು ಮುಂದೂಡಿದೆ. ಸಿಬಿಎಸ್ಇ ಮತ್ತು ಐಸಿಎಸ್ಇ ಪರೀಕ್ಷೆಗಳನ್ನು ಮಾತ್ರ ವೇಳಾಪಟ್ಟಿಯನ್ವಯ ನಡೆಸಲಾಗುತ್ತಿದೆ. ಈಗಾಗಲೇ ಮುಂದೂಡಿರುವ ಪರೀಕ್ಷೆಗಳ ದಿನಾಂಕವನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುತ್ತದೆ. ಈ ಕುರಿತ ಸಂದೇಶವನ್ನು ಎಲ್ಲಾ ಜಿಲ್ಲಾ ಶಿಕ್ಷಣ ಅಧಿಕಾರಿಗಳೂ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಿತಕರ ಘಟನೆಗಳನ್ನುೋ ನಡೆಯದಂತೆ ಎಚ್ಚರಿಕೆ ವಹಿಸಿರುವ ಪಂಜಾಬ್ ರಾಜ್ಯ ಸರ್ಕಾರ, ರಾಜ್ಯದ ಪೊಲೀಸರು ಸೇರಿದಂತೆ ಹೆಚ್ಚುವರಿಯಾಗಿ 12,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಿದೆ ಎಂದು ತಿಳಿದುಬಂದಿದೆ.
ಎಸ್'ಟಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣಗಳನ್ನು ತಕ್ಷಣವೇ ದಾಖಲಿಸಬೇಕು ಮತ್ತು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂಬ ನಿಯಮವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಇತ್ತೀಚೆಗಷ್ಟೇ ತೀರ್ಪೊಂದನ್ನು ನೀಡಿತ್ತು. ತೀರ್ಪು ಸಂಬಂಧಿಸಿ ಕಳೆದ ವಾರ ಕೇಂದ್ರ ಸಚಿವರುಗಳಾದ ರಾಮ್ ವಿಲಾಸ್ ಪಾಸ್ವಾನ್ ಮತ್ತು ಥಾವರ್ ಚಂದ್ ಗೆಹ್ಲೋಟ್ ನೇತೃತ್ವದ ಎನ್'ಡಿಎ ಸಂಸದರ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿತ್ತು.
ಆಗ್ರಾ, ಬಿಹಾರ, ಒಡಿಶಾ, ಪಂಜಾಬ್ ರಾಜ್ಯಗಳಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ
ಎಸ್'ಸಿ/ಎಸ್'ಟಿ ಕಾಯ್ದೆ ಕುರಿತು ಆದೇಶವನ್ನು ಸುಪ್ರೀಂಕೋರ್ಟ್ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಲಿ ದಲಿತ ಸಂಘಟನೆಗಳು ಆಗ್ರಾ, ಬಿಹಾರ, ಒಡಿಶಾ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ವರದಿಗಿಳು ತಿಳಿಸಿವೆ.
ಪ್ರತಿಭಟನೆ ವೇಳೆ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಘೋಷಣೆಗಳನ್ನು ಕೂಗಿರುವ ಪ್ರತಿಭಟನಾಕಾರರು, ಕೆಲ ಅಂಗಡಿಗಳಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರು ರೈಲು ಹಳಿಗಳನ್ನು ಮುತ್ತಿಗೆ ಹಾಕಿದ್ದರಿಂದ ಹಲವೆಡೆ ರೈಲು ಸಂಚಾರದ ಮೇಲೂ ಪರಿಣಾಮಗಳು ಬೀರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


