ಅಂಬೇಡ್ಕರ್'ಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಅವರ ಅನುಯಾಯಿಯಂತೆ ನಟಿಸುತ್ತಿದೆ: ಕೇಂದ್ರ ಸಚಿವ
ಸಂವಿಧಾನ ಶಿಲ್ಪಿ, ದಲಿತರ ದಿಟ್ಟ ನಾಯಕ ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿದ ಕಾಂಗ್ರೆಸ್, ಇಂದು ಅಂಬೇಡ್ಕರ್ ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕೇಂದ್ರ ಸಚಿವ ರಾಮ್'ವಿಲಾಸ್ ಪಾಸ್ವಾನ್ ಅವರು ಸೋಮವಾರ ಹೇಳಿದ್ದಾರೆ...

Published On :
ನವದೆಹಲಿ: ಸಂವಿಧಾನ ಶಿಲ್ಪಿ, ದಲಿತರ ದಿಟ್ಟ ನಾಯಕ ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಿದ ಕಾಂಗ್ರೆಸ್, ಇಂದು ಅಂಬೇಡ್ಕರ್ ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕೇಂದ್ರ ಸಚಿವ ರಾಮ್'ವಿಲಾಸ್ ಪಾಸ್ವಾನ್ ಅವರು ಸೋಮವಾರ ಹೇಳಿದ್ದಾರೆ.
ಎಸ್'ಸಿ/ಎಸ್'ಟಿ ಕಾಯ್ದೆ ಕುರಿತ ದಲಿತ ಸಂಘಟನೆಗಳ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ನಮ್ಮ ಸರ್ಕಾರ ಅತ್ಯಂತ ಶೀಘ್ರಗತಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ನೀಡುತ್ತಿದ್ದಂತೆಯೇ ನಮ್ಮ ಸರ್ಕಾರ ಈ ಬಗ್ಗೆ ಸಾಕಷ್ಟು ಚರ್ಚೆಗಳನ್ನು ನಡೆಸಿತು. ಅಂತಿಮವಾಗಿ ಆದೇಶ ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದೆ. ಜನರ ಪ್ರತಿಭಟನೆಯನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ, ವಿರೋಧ ಪಕ್ಷಗಳೇಕೆ ಇದರಲ್ಲಿ ರಾಜಕೀಯ ಮಾಡುತ್ತಿವೆ ಎಂದು ಪ್ರಶ್ನಿಸಿದ್ದಾರೆ.
ಬಿ.ಆರ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ನೀಡದ ಕಾಂಗ್ರೆಸ್ ಪಕ್ಷ ಇಂದು ಅವರ ಅನುಯಾಯಿಯೆಂಬಂತೆ ನಾಟಕವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CongressBharat RatnaBR Ambedkarಬಿಆರ್. ಅಂಬೇಡ್ಕರ್SC/ST Actಎಸ್\'ಸಿ/ಎಸ್\'ಟಿ ಕಾಯ್ದೆRamvilas Paswanಕಾಂಗ್ರೆಸ್ ಭಾರತ ರತ್ನರಾಮ್\'ವಿಲಾಸ್ ಪಾಸ್ವಾನ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


