ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ ಅರವಿಂದ್ ಕೇಜ್ರಿವಾಲ್
ಕಳೆದ ತಿಂಗಳಷ್ಟೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಬಳಿ ಕ್ಷಮೆಯಾಚಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ್ದಾರೆ.

ನವದೆಹಲಿ : ಕಳೆದ ತಿಂಗಳಷ್ಟೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಬಳಿ ಕ್ಷಮೆಯಾಚಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ್ದಾರೆ.
ಮಾನಹಾನಿ ಪ್ರಕರಣವೊಂದರಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಳಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಸಂಜಯ್ ಸಿಂಗ್ , ಅಶುತೋಷ್ ಜಂಟಿಯಾಗಿ ಕ್ಷಮಾಪಣೆ ಕೋರಿದ್ದಾರೆ.
ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ರಾಘವ್ ಚಾಂದಾ, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್ , ಅಶುತೋಷ್ ಹಾಗೂ ದೀಪಕ್ ಬಾಜ್ ಪೈ ಪೈವಿರುದ್ಧ 10 ಕೋಟಿ ರೂಪಾಯಿಗಳ ಮಾನಹಾನಿ ಪ್ರಕರಣವನ್ನು ಅರುಣ್ ಜೇಟ್ಲಿ ದಾಖಲಿಸಿದ್ದರು.
Delhi CM Arvind Kejriwal, AAP leaders Sanjay Singh,Ashutosh and Raghav Chadha apologize to Union Finance Minister Arun Jaitley in the defamation case he had filed against them pic.twitter.com/CJFqxVD738
— ANI (@ANI) 2 એપ્રિલ, 2018
ಅರುಣ್ ಜೇಟ್ಲಿ ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದಾಗ ಸಾಕಷ್ಟು ಹಣಕಾಸು ಅವ್ಯವಹಾರ ನಡೆಸಿದ್ದಾರೆ ಎಂದು ಈ ಆರು ಮಂದಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


