ಕಾವೇರಿ ವಿವಾದ: ನಿರ್ವಹಣಾ ಮಂಡಳಿ ರಚನೆಗೆ ಆಗ್ರಹ, ಎಐಎಡಿಎಂಕೆ ಉಪವಾಸ ಸತ್ಯಾಗ್ರಹ ಆರಂಭ
ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ...

Published On :
ಚೆನ್ನೈ: ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಇಂದು ಬೆಳಿಗ್ಗೆ ಮರೀನಾ ಬೀಚ್ ಸಮೀಪದ ಚೆಪುಕ್'ಗೆ ಆಗಮಿಸಿದ ಪಳನಿಸ್ವಾಮಿ ಮತ್ತು ಪನ್ನೀರ್ ಸೆಲ್ವಂ ಅವರು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದು, ಈ ಮೂಲಕ ಈಗಾಗಲೇ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ.
ಕಾವೇರಿ ವಿವಾದ ಸಂಬಂಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಕೊಯಿಮತ್ತೂರಿನಲ್ಲಿ ವ್ಯಾಪಾರಿಗಳ ಸಂಘಟನೆ ಬೆಂಬಲ ವ್ಯಕ್ತಪಡಿಸಿದ್ದು, ಮಾರುಕಟ್ಟೆಗಳನ್ನು ಬಂದ್ ಮಾಡಿವೆ. ಈ ನಡುವೆ ತಮಿಳುನಾಡು ರಾಜ್ಯಪಾಲ ಬರ್ವಾರಿಲಾಲ್ ಪುರೋಹಿತ್ ಅವರು ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಇನ್ನು ಕಾವೇರಿ ವಿವಾದ ಸಂಬಂಧ ಬಿಜೆಪಿ ವಿರುದ್ಧ ಹರಿಹಾಯ್ದಿರುವ ತಮಿಳುನಾಡಿನ ರಾಜಕೀಯ ನಾಯಕರು, ಕಾವೇರಿ ನಿರ್ವಹಣಾ ಮಂಡಳಿಗೆ ಕರ್ನಾಟಕ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ಕರ್ನಾಟಕದ ಪರ ಎಂಬಂತೆ ವರ್ತಿಸುತ್ತಿದೆ ಎಂದು ಹೇಳಿದ್ದಾರೆ.
6 ವಾರಗಳಳೊಗಾಗಿ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ರಚನೆ ಮಾಡುವಂತೆ ಕಳೆದ ಫೆ.16 ರಂದು ನಡೆಜ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಆದೇಶ ಪಾಲಿಸದೇ ಸಮಿತಿ ರಚಿಸುವಲ್ಲಿ ವಿಫರವಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ರಾಜ್ಯ ತೀವ್ರ ಪ್ರತಿಭಟನೆಗಳನ್ನು ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ತಮಿಳುನಾಡುಪ್ರತಿಭಟನೆprotestTamil NaduHunger Strikeಉಪವಾಸ ಸತ್ಯಾಗ್ರಹCauvery water DisputePanneerselvamಕಾವೇರಿ ನದಿ ನೀರು ವಿವಾದEdappadi K. Palaniswamiಎಡಪ್ಪಾಡಿ ಕೆ. ಪಳನಿಸ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


