ದೇಶ

ಭಾರತ್ ಬಂದ್ ಹಿಂಸಾಚಾರಕ್ಕೆ ಉತ್ತೇಜನ ನೀಡಿದ್ದ ಬಿಎಸ್ ಪಿ ಮಾಜಿ ಶಾಸಕನ ಬಂಧನ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ಭಾರತ್ ಬಂದ್ ವೇಳೆ ಮೀರತ್ ನಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಆರೋಪದಡಿ ಬಹುಜನ ಸಮಾಜವಾದಿ ಪಕ್ಷದ ಮಾಜಿ ಶಾಸಕನನ್ನು

ಭಾರತ್ ಬಂದ್ ಹಿಂಸಾಚಾರಕ್ಕೆ ಉತ್ತೇಜನ ನೀಡಿದ್ದ ಬಿಎಸ್ ಪಿ ಮಾಜಿ ಶಾಸಕನ ಬಂಧನ
ಹಿಂಸಾಚಾರ
Published On :
ಮೀರತ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ಭಾರತ್ ಬಂದ್ ವೇಳೆ ಮೀರತ್ ನಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಆರೋಪದಡಿ ಬಹುಜನ ಸಮಾಜವಾದಿ ಪಕ್ಷದ ಮಾಜಿ ಶಾಸಕನನ್ನು ಬಂಧಿಸಲಾಗಿದೆ. 
ಯೋಗೇಶ್ ವರ್ಮಾ ಬಂಧಿತ ಮಾಜಿ ಶಾಸಕನಾಗಿದ್ದು, ಮೀರತ್ ನಲ್ಲಿ ಹಿಂಸಾಚಾರ ಹೆಚ್ಚುವುದಕ್ಕೆ ಯೋಗೇಶ್ ವರ್ಮಾ ಮುಖ್ಯವಾಗಿ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಬಂಧಿಸಲಾಗಿದೆ ಎಂದು ಎಸ್ಎಸ್ ಪಿ ಹೇಳಿದ್ದಾರೆ. ಹಿಂಸಾಚಾರದಲ್ಲಿ 200 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು, ಎಲ್ಲರ ವಿರುದ್ಧವೂ ಪ್ರಕರಣದ ದಾಖಲಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
ಬಂದ್ ವೇಳೆ ನಡೆದ ಹಿಂಸಾಚಾರವನ್ನು ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಖಂಡಿಸಿದ್ದು, ಸಮಾಜ ಘಾತುಕ ಶಕ್ತಿಗಳನ್ನು ಹಿಂಸಾಚಾರ ಉಂಟುಮಾಡಲೆಂದೇ ಕಳಿಸಲಾಗಿತ್ತು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.