ದೇಶ

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ಸತತ 6 ಗಂಟೆಗಳ ಕಾಲ ಶಾಲಾ ಪ್ರಾಂಶುಪಾಲರ ವಿಚಾರಣೆ

ಸಿಬಿಎಸ್ಇ ಯ 12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ 1 ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿಕ್ಷಕರ ಶಾಲೆಯ ಪ್ರಾಂಶುಪಾಲರನ್ನು ಸತತ 6 ಗಂಟೆಗಳವರೆಗೆ...

ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ: ಸತತ 6 ಗಂಟೆಗಳ ಕಾಲ ಶಾಲಾ ಪ್ರಾಂಶುಪಾಲರ ವಿಚಾರಣೆ
ಸಿಬಿಎಸ್ಇ ಪ್ರಶ್ನೆ ಪತ್ರಿಕೆ
Published On :
ನವದೆಹಲಿ: ಸಿಬಿಎಸ್ಇ ಯ 12 ನೇ ತರಗತಿಯ ಅರ್ಥಶಾಸ್ತ್ರ ಹಾಗೂ 1 ನೇ ತರಗತಿಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಿಕ್ಷಕರ ಶಾಲೆಯ ಪ್ರಾಂಶುಪಾಲರನ್ನು ಸತತ 6 ಗಂಟೆಗಳವರೆಗೆ ವಿಚಾರಣೆ ನಡೆಸಲಾಗಿದೆ. 
ಹರ್ಯಾಣದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರಬಹುದೆಂಬ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಇನ್ನು ಅಮಾನತುಗೊಂಡಿರುವ ಸಿಬಿಎಸ್ಇ ಅಧಿಕಾರಿ  ಆರೋಪಿಗಳೊಂದಿಗೆ ಶಾಮೀಲಾಗಿರುವುದಕ್ಕೂ ಯಾವುದೇ ಮಹತ್ವದ ಸಾಕ್ಷ್ಯಗಳು ಪೊಲೀಸರಿಗೆ ಈ ವರೆಗೂ ಲಭ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಸಿಬಿಎಸ್ಇ ಅಧಿಕಾರಿ ಆರೋಪಿಗಳೊಂದಿಗೆ ಶಾಮೀಲಾಗಿರುವ ಸಾಧ್ಯತೆಯನ್ನು ಪೊಲೀಸರು ತಳ್ಳಿಹಾಕಿದ್ದಾರೆ. 
ಪ್ರಶ್ನೆಪತ್ರಿಕೆಗಳನ್ನು ತಲುಪಿಸುವುದರಲ್ಲಿ ಅಧಿಕಾರಿ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದೆ, ಅಮಾನತುಗೊಂಡಿರುವ ಅಧಿಕಾರಿ ಎಲ್ಲಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನೂ ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ತಲುಪಿಸಿದ್ದಾರೆ. ಆದರೆ ಸೋರಿಕೆಯ ಪ್ರಕರಣದಲ್ಲಿ ಆರೋಪಿಗಳೊಂದಿಗೆ ಶಾಮೀಲಾಗಿರುವುದಕ್ಕೆ ಈ ವರೆಗೂ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.   
ಪ್ರಾಂಶುಪಾಲರ ಜೊತೆಗೆ ಈಗಾಗಲೇ ಬಂಧನಕ್ಕೊಳಗಾಗಿರುವ ಶಿಕ್ಷಕರನ್ನೂ ಸಹ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.